ADVERTISEMENT

ಹೊಸ ಕಾರು ಖರೀದಿಸಿದ ನಟ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಫೆಬ್ರುವರಿ 2026, 10:52 IST
Last Updated 7 ಫೆಬ್ರುವರಿ 2026, 10:52 IST
<div class="paragraphs"><p>ನಟ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ</p></div>

ನಟ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ

   

ಚಿತ್ರ: ಇನ್‌ಸ್ಟಾಗ್ರಾಂ

ಚಂದನವನದ ಜನಪ್ರಿಯ ದಂಪತಿ, ಸಿಂಹಪ್ರಿಯಾ ಎಂದೇ ಖ್ಯಾತಿ ಪಡೆದಿರುವ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಹೊಸ ಕಾರನ್ನು ಖರೀದಿ ಮಾಡಿದ್ದಾರೆ. ಅದರ ವಿಡಿಯೊವನ್ನು ದಂಪತಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ADVERTISEMENT

ದಂಪತಿ ಟೊಯೋಟಾ ಕಾರನ್ನು ಖರೀದಿ ಮಾಡಿದ್ದು, ಆದರೆ ಕಾರಿನ ನಿಖರ ಬೆಲೆ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ. ಇದೇ ವಿಡಿಯೊ ನೋಡಿದ ಅಭಿಮಾನಿಗಳು ಶುಭ ಕೋರುತ್ತಿದ್ದಾರೆ. ವಿಡಿಯೊದಲ್ಲಿ ನಟ ವಸಿಷ್ಠ ಸಿಂಹ, ನಟಿ ಹರಿಪ್ರಿಯಾ ಮತ್ತು ಅವರ ಮುದ್ದಿನ ಮಗ ವಿಪ್ರ ಇರುವುದನ್ನು ಕಾಣಬಹುದು.

ಇತ್ತೀಚೆಗೆ ನಟ​ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಅವರು ತಮ್ಮ ಮುದ್ದಿನ ಮಗನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದರು. ವಿಶೇಷ ಏನೆಂದರೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ಮದುವೆ ಆದ ದಿನಾಂಕದಂದೇ ಗಂಡು ಮಗು ಜನಿಸಿತ್ತು. ಅಂದರೆ 2025ರ ಜನವರಿ 26ರಂದು ಪುತ್ರನ ಆಗಮನವಾಗಿತ್ತು. ಈ ಬಗ್ಗೆ ಖುದ್ದು ವಸಿಷ್ಠ ಸಿಂಹ ಅವರು ಪೋಸ್ಟ್ ಹಂಚಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.