ADVERTISEMENT

ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ: ಆರೋಗ್ಯ ಗಂಭೀರ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2022, 18:15 IST
Last Updated 9 ಅಕ್ಟೋಬರ್ 2022, 18:15 IST
ಲೋಹಿತಾಶ್ವ
ಲೋಹಿತಾಶ್ವ   

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತವಾಗಿದೆ.

ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರಿದಿದೆ.

ಟಿ.ಎಸ್. ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ADVERTISEMENT

ಅವರು ಚಿತ್ರರಂಗದಲ್ಲಿ ತಮ್ಮ ಗಂಭೀರ ಧ್ವನಿಗೆ ಹೆಸರಾದವರು.. ಅವರ ಪುತ್ರ ನಟ ಶರತ್ ಲೋಹಿತಾಶ್ವ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯ ಖಳನಟರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.