ADVERTISEMENT

ನಟ ಶಿವರಾಂ ಅಂತಿಮ ದರ್ಶನ ಪಡೆದ ಗಣ್ಯರು: ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 3:59 IST
Last Updated 5 ಡಿಸೆಂಬರ್ 2021, 3:59 IST
ಎಸ್. ಶಿವರಾಂ ಪಾರ್ಥಿವ ಶರೀರ, ಪ್ರಜಾವಾಣಿ ಚಿತ್ರ
ಎಸ್. ಶಿವರಾಂ ಪಾರ್ಥಿವ ಶರೀರ, ಪ್ರಜಾವಾಣಿ ಚಿತ್ರ   

ಬೆಂಗಳೂರು: ಶನಿವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಎಸ್. ಶಿವರಾಂ (83) ಅಂತಿಮ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗಿದೆ.

ನಟಿ ತಾರಾ ಅನುರಾಧಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಟ ಸುಂದರ್‌ ರಾಜ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜಯರಾಜ್, ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ಈ ವೇಳೆ ಅಭಿಮಾನಿಗಳು, ಸಾರ್ವಜನಿಕರು ಕೂಡ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿ ನಟನಿಗೆ ನಮನ ಸಲ್ಲಿಸಿದರು.

ADVERTISEMENT

ಬೆಳಿಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಶಿವರಾಂ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.