ADVERTISEMENT

ನೃತ್ಯ ನಿರ್ದೇಶಕ ಶಿವಶಂಕರ್‌ ಮಾಸ್ಟರ್‌ ಕೋವಿಡ್‌ನಿಂದ ನಿಧನ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 5:03 IST
Last Updated 29 ನವೆಂಬರ್ 2021, 5:03 IST
 ಶಿವಶಂಕರ್‌
ಶಿವಶಂಕರ್‌   

ಹೈದರಾಬಾದ್‌: ತೆಲುಗು, ತಮಿಳಿನ ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್‌ ಮಾಸ್ಟರ್‌ ಅವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಶಿವಶಂಕರ್‌ ಮಾಸ್ಟರ್‌ ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

ಶಿವಶಂಕರ್‌ ಸೇರಿದಂತೆ ಅವರ ಹಿರಿಯ ಮಗನಿಗೆ ಕೋವಿಡ್‌ ದೃಢಪಟ್ಟಿತ್ತು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ADVERTISEMENT

ಆಸ್ಪತ್ರೆಯ ಚಿಕಿತ್ಸೆ ವೆಚ್ಚವನ್ನು ಭರಿಸಲು ಬಾಲಿವುಡ್‌ ನಟ ಸೋನು ಸೂದ್‌ ಒಪ್ಪಿಕೊಂಡಿದ್ದರು. ಅವರು ಟ್ವಿಟರ್‌ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು.

ಈವರೆಗೂ ಸುಮಾರು 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಕೆಲಸ ಮಾಡಿದ್ದರು. ಹಲವು ಸಲ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದರು. ಮಗಧೀರ ಸಿನಿಮಾದ ನೃತ್ಯಕ್ಕೆ ಅವರಿಗೆ ರಾಷ್ಟ್ರಪಶಸ್ತಿ ಸಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.