ಹೈದರಾಬಾದ್: ತೆಲುಗು ಹಿರಿಯ ನಟ ಕೈಕಲಾ ಸತ್ಯನಾರಾಯಣ (87) ಅವರು ಶುಕ್ರವಾರ ನಿಧನರಾಗಿದ್ದಾರೆ.
ಖಳನಟ ಮತ್ತು ಇತರ ಪಾತ್ರಗಳಿಗೆ ಹೆಸರಾದ ಸತ್ಯನಾರಾಯಣ ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.
ಆರು ದಶಕಗಳ ಸಿನಿಜೀವನದಲ್ಲಿ 700ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಸತ್ಯನಾರಾಯಣ, ಕನ್ನಡದಲ್ಲಿ ಡಾ.ರಾಜ್‌ಕುಮಾರ್ ಅವರೊಂದಿಗೂಅಭಿನಯಿಸಿದ್ದರು.ರಾಜಕೀಯದಲ್ಲಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು.
ಸತ್ಯನಾರಾಯಣ ನಿಧನಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಮಾಜಿ ಸಿ.ಎಂ, ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.