ADVERTISEMENT

ವಿಜಯ್‌ ದೇವರಕೊಂಡ ಅಭಿನಯದ ‘ಲೈಗರ್’ ಸಿನಿಮಾ: ಜುಲೈ 21ರಂದು ಟ್ರೈಲರ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 11:20 IST
Last Updated 19 ಜುಲೈ 2022, 11:20 IST
ಪೋಸ್ಟರ್‌
ಪೋಸ್ಟರ್‌   

ಮುಂಬೈ: ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾದ ಟ್ರೈಲರ್‌ ಜುಲೈ 21ರಂದು ಬಿಡುಗಡೆಯಾಗಲಿದೆ.

ಈ ಬಗ್ಗೆ ನಟ ವಿಜಯ್‌ ದೇವರಕೊಂಡ ಟ್ವೀಟ್‌ ಮಾಡಿದ್ದಾರೆ. ಜುಲೈ 20 ಹಾಗೂ 21ರಂದು ಮುಂಬೈ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಕಾರ್ಯಕ್ರಮಗಳು ಜರುಗಲಿವೆ. 21ರಂದು ಟ್ರೈಲರ್‌ ಬಿಡುಗಡೆಯಾಗಲಿದೆ.

‘ಲೈಗರ್’ ಚಿತ್ರದಲ್ಲಿ ಬಾಕ್ಸಿಂಗ್ ಪಟುವಾಗಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ. ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಹಾಗೂ ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಜೊತೆ ವಿಜಯ್‌ ನಟಿಸಿದ್ದಾರೆ.

ADVERTISEMENT

‘ಪೋಕಿರಿ’ ಖ್ಯಾತಿಯ ಪುರಿ ಜಗನ್ನಾಥ್ ಚಿತ್ರವನ್ನು ನಿರ್ದೇಶಿಸಿದ್ದು, ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ.

ಈ ಚಿತ್ರ ಆಗಸ್ಟ್ 25ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆಚಿತ್ರತಂಡ ಮಾಹಿತಿ ನೀಡಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.