ADVERTISEMENT

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ವಿಜಯ್ ದೇವರಕೊಂಡ

ಪಿಟಿಐ
Published 6 ಆಗಸ್ಟ್ 2025, 6:44 IST
Last Updated 6 ಆಗಸ್ಟ್ 2025, 6:44 IST
ವಿಜಯ್ ದೇವರಕೊಂಡ
ವಿಜಯ್ ದೇವರಕೊಂಡ   

ಹೈದರಾಬಾದ್‌: ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ವಿಜಯ್ ದೇವರಕೊಂಡ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಮುಂದೆ ಹಾಜರಾದರು.

ಪ್ರಕರಣ ಸಂಬಂಧ ಜುಲೈ 30ರಂದು ನಟ ಪ್ರಕಾಶ್‌ ರಾಜ್‌ ಅವರು ಇ.ಡಿ ಅಧಿಕಾರಿಗಳ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟ ವಿಜಯ್‌ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್‌ ರಾಜ್‌ ಸೇರಿ 29 ಖ್ಯಾತನಾಮರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಪ್ರತ್ಯೇಕ ದಿನಾಂಕಗಳಂದು ವಿಚಾರಣೆಗೆ ಹಾಜರಾಗುವಂತೆ ಜುಲೈ 10ರಂದು ಸಮನ್ಸ್ ಜಾರಿ ಮಾಡಿತ್ತು.

ADVERTISEMENT

ನಟಿ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್‌, ಪ್ರಣೀತಾ ಸುಭಾಶ್‌, ಅನನ್ಯಾ ನಾಗಲ್ಲಾ, ಟಿ.ವಿ ನಿರೂಪಕಿ ಶ್ರೀಮುಖಿ ಹಾಗೂ ತೆಲಂಗಾಣದ ಸಾಮಾಜಿಕ ಜಾಲತಾಣಗಳ ಇನ್‌ಫ್ಲುಯೆನ್ಸರ್‌ಗಳು, ಯೂಟ್ಯೂಬರ್‌ಗಳ ಹೆಸರುಗಳೂ ಪ್ರಕರಣದಲ್ಲಿ ಇವೆ.

ಈ ಆ್ಯಪ್‌ಗಳು ಅಕ್ರಮ ಬೆಟ್ಟಿಂಗ್‌ ಮತ್ತು ಜೂಜಾಟದಿಂದ ಕಾನೂನು ಬಾಹಿರವಾಗಿ ಕೋಟ್ಯಂತರ ರೂಪಾಯಿ ಗಳಿಸಿವೆ ಎಂಬ ಆರೋಪವಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.