ತೆಲಂಗಾಣ: ವಿಜಯ್ ದೇವರಕೊಂಡ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ನಟ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಈ ಬಗ್ಗೆ 'ಎನ್‌ಡಿಟಿವಿ' ವರದಿ ಮಾಡಿದೆ.
ತೆಲಂಗಾಣದ ಜೋಗುಳಂಬ ಗಡ್ವಾಲ್ ಜಿಲ್ಲೆಯ ಎನ್ಎಚ್ -44ನಲ್ಲಿ (ಹೈದರಾಬಾದ್-ಬೆಂಗಳೂರು ಹೆದ್ದಾರಿ) ಇಂದು ಮುಂಜಾನೆ ಅಪಘಾತ ಸಂಭವಿಸಿದೆ.
ವಿಜಯ್ ದೇವರಕೊಂಡ ಅವರು ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದಾಗ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ಈ ಬಗ್ಗೆ ವಿಜಯ್ ಅವರ ಅವರ ಕಾರು ಚಾಲಕ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಳಿಕ ವಿಜಯ್ ದೇವರಕೊಂಡ ಕೂಡ ಸುರಕ್ಷಿತವಾಗಿ ಹೈದರಾಬಾದ್ ತಲುಪಿದ್ದಾರೆ.
ಅಕ್ಟೋಬರ್ 3 ರಂದು ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ನೆರವೇರಿದೆ ಎನ್ನಲಾಗಿದೆ. ಸಮಾರಂಭದದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರು ಮಾತ್ರ ಹಾಜರಿದ್ದರು. ನಿಶ್ಚಿತಾರ್ಥದ ಬಳಿಕ ವಿಜಯ್ ಅವರು ಇಂದು ತಮ್ಮ ಕುಟುಂಬದೊಂದಿಗೆ ಪುಟ್ಟಪರ್ತಿಯಲ್ಲಿರುವ ಶ್ರೀ ಸತ್ಯಸಾಯಿ ಬಾಬಾ ಅವರ ಪ್ರಶಾಂತಿ ನಿಲಯಂ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.