ADVERTISEMENT

Tollywood Movie: ವಿಜಯ್‌ಗೆ ಕೀರ್ತಿ ಜೋಡಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 22:30 IST
Last Updated 14 ಅಕ್ಟೋಬರ್ 2025, 22:30 IST
ವಿಜಯ್‌ ದೇವರಕೊಂಡ, ಕೀರ್ತಿ ಸುರೇಶ್‌ 
ವಿಜಯ್‌ ದೇವರಕೊಂಡ, ಕೀರ್ತಿ ಸುರೇಶ್‌    

ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ನಟನೆಯ ಹೊಸ ಸಿನಿಮಾ ಸೆಟ್ಟೇರಿದೆ. ವಿಜಯ್‌ಗೆ ಜೋಡಿಯಾಗಿ ಈ ಬಾರಿ ಕೀರ್ತಿ ಸುರೇಶ್‌ ನಟಿಸುತ್ತಿದ್ದು, ಹೈದರಾಬಾದ್‌ನಲ್ಲಿ ಇತ್ತೀಚೆಗೆ ಚಿತ್ರದ ಮುಹೂರ್ತ ನಡೆದಿದೆ. 

ನಿರ್ಮಾಪಕ ಅಲ್ಲು ಅರವಿಂದ್ ಅವರು ಚಿತ್ರಕ್ಕೆ ಕ್ಲ್ಯಾಪ್‌ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಚಿತ್ರೀಕರಣಕ್ಕೆ ಚಾಲನೆ ನೀಡಿದರೆ, ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ‘ರಾಜಾ ವಾರು ರಾಣಿ ಗಾರು’ ಚಿತ್ರದ ಮೂಲಕ ಖ್ಯಾತಿ ಪಡೆದ ನಿರ್ದೇಶಕ ರವಿಕಿರಣ್ ಕೋಲಾ ಈ ಪ್ರಾಜೆಕ್ಟ್‌ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59 ನೇ ಚಿತ್ರ ಇದಾಗಿದೆ. ಗ್ರಾಮೀಣ ಆ್ಯಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದ್ದು, ಇದೇ ತಿಂಗಳ 16ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.