ಎಕ್ಸ್ ಖಾತೆ: @TheDeverakonda
ಹೈದರಾಬಾದ್: ಗೌತಮ್ ತಿನ್ನನುರಿ ನಿರ್ದೇಶನದ, ನಟ ವಿಜಯ್ ದೇವರಕೊಂಡ ಅಭಿನಯದ ಬಹುನಿರೀಕ್ಷಿತ ಚಿತ್ರ 'ಕಿಂಗ್‌ಡಮ್' ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
'ಕಿಂಗ್‌ಡಮ್' ಚಿತ್ರ ಜುಲೈ 4ಕ್ಕೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಹಿಂದೆ ಮೇ 30ಕ್ಕೆ ಚಿತ್ರ ಬಿಡುಗಡೆ ದಿನಾಂಕ ನಿಗದಿಯಾಗಿತ್ತು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ್ ದೇವರಕೊಂಡ, ಪ್ರಸ್ತುತ ದೇಶದ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಚಿತ್ರದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಚಿತ್ರತಂಡ ಈ ಹಿಂದೆ ಹೇಳಿದ್ದ ದಿನಾಂಕದಂದೇ ಚಿತ್ರವನ್ನು ಬಿಡುಗಡೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗಳಿಂದ ದಿನಾಂಕವನ್ನು ಮುಂದೂಡಬೇಕಾಯಿತು ಎಂದು ಹೇಳಿದ್ದಾರೆ.
ಚಿತ್ರದ ಪ್ರಚಾರಗಳಿಗೂ ಸಮಯಬೇಕಾಗಿದ್ದು, ಜುಲೈ 4ರಂದು ಸಿನಿಮಾ ಮಂದಿರಗಳಲ್ಲಿ ನಿಮ್ಮನ್ನು ನೋಡಲು ಇಚ್ಛಿಸುತ್ತೇವೆ. ನಿಮ್ಮ ಆಶೀರ್ವಾದ ಚಿತ್ರದ ಮೇಲಿರಲಿದೆ ಎಂದು ಆಶಿಸುತ್ತೇವೆ ಎಂದು ದೇವರಕೊಂಡ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಈ ಚಿತ್ರವನ್ನು ನಿರ್ಮಿಸಿವೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.