ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರದಲ್ಲಿ ರಾಧಿಕಾ ನಾರಾಯಣ್ ನಟಿಸುತ್ತಿದ್ದಾರೆ.
ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟ ಮಿತ್ರ ಅವರೂ ಮುಖ್ಯಭೂಮಿಕೆಯಲ್ಲಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ‘ಶಿವಾಜಿ ಸುರತ್ಕಲ್’, ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲೂ ನಟಿಸಿದ್ದಾರೆ.
‘ಮಹಾನ್’ ರೈತರ ಕುರಿತಾದ ಚಿತ್ರ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಸಾಮಾಜಿಕ ಕಳಕಳಿ ಹೊಂದಿರುವ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಖುಷಿಯಿದೆ. ನಾನು ಈ ಚಿತ್ರದಲ್ಲಿ ಹಳ್ಳಿಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ’ ಎಂದು ಪಾತ್ರದ ಬಗ್ಗೆ ಮಾಹಿತಿ ನೀಡಿದರು ರಾಧಿಕಾ ನಾರಾಯಣ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.