ಇತ್ತೀಚೆಗಷ್ಟೇ ಸೆಟ್ಟೇರಿ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ‘ರುದ್ರಾಭಿಷೇಕಂ’ ಚಿತ್ರದಲ್ಲಿ ವಿಜಯ ರಾಘವೇಂದ್ರ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಸಂತ್ ಕುಮಾರ್ ನಿರ್ದೇಶನದ ಚಿತ್ರಕ್ಕೆ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬಂಡವಾಳ ಹೂಡಿದೆ.
‘ನಟ ವಿಜಯ ರಾಘವೇಂದ್ರ ತಂದೆ ಮತ್ತು ಮಗನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಮೊದಲ ಬಾರಿಗೆ ವೀರಗಾಸೆ ಕಲಾವಿದನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಾಡಿನ ಸಾಂಸ್ಕೃತಿಕ ಹಿನ್ನೆಲೆ, ಇತಿಹಾಸ, ಅದರ ವೈಭವವನ್ನು ಕಮರ್ಷಿಯಲ್ ಆಗಿ ಹೇಳಲು ಪ್ರಯತ್ನಿಸಿದ್ದೇವೆ. ದೇವನಹಳ್ಳಿ ಸುತ್ತಮುತ್ತ ಮೊದಲ ಹಂತದ ಚಿತ್ರೀಕರಣ ನಡೆಸಲಾಗಿದೆ. ಫೆಬ್ರುವರಿ ಎರಡನೇ ವಾರದಿಂದ 2ನೇ ಹಂತದ ಶೂಟಿಂಗ್ ಪ್ರಾರಂಭಿಸಲಾಗುವುದು. ಈ ಹಂತದಲ್ಲಿ ಮಾತಿನಭಾಗ ಹಾಗೂ ಎರಡು ಹಾಡುಗಳನ್ನು ದೇವನಹಳ್ಳಿ, ವಿಜಯಪುರದಲ್ಲಿ ಚಿತ್ರೀಕರಿಸಿ, ಉಳಿದೆರಡು ಹಾಡುಗಳನ್ನು ಮಲ್ಪೆ, ಮಂಗಳೂರು ಹಾಗೂ ಆಗುಂಬೆ ಸುತ್ತಮುತ್ತ ಚಿತ್ರೀಕರಿಸುವ ಯೋಜನೆಯಿದೆ’ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಪ್ರಿಯಾಂಕ ತಿಮ್ಮೇಶ್ ಚಿತ್ರದ ನಾಯಕಿ. ವಿ.ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.