ಸಂಕ್ರಾಂತಿ ಹಬ್ಬದ ಆಚರಿಸಿದ ವಿಜಯಲಕ್ಷ್ಮೀ
ಚಿತ್ರ: ಇನ್‌ಸ್ಟಾಗ್ರಾಂ
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್ ಹೌಸ್‌ನಲ್ಲಿ ಸಂಭ್ರಮದಿಂದ ಆಚರಿಸಿದ್ದಾರೆ. ಕಳೆದ ವರ್ಷ ದರ್ಶನ್ ಜತೆ ಸೇರಿ ಆಚರಣೆ ಮಾಡಿದ್ದರು. ಆದರೆ ಈ ವರ್ಷ ದರ್ಶನ್ ಜೈಲಿನಲ್ಲಿರುವುದರಿಂದ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿರುವ ಫೋಟೊ ಹಾಗೂ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ದರ್ಶನ್ ಅವರು ಬಹಳ ಪ್ರೀತಿಯಿಂದ ತಮ್ಮ ಫಾರ್ಮ್ ಹೌಸ್‌ನಲ್ಲಿ ಕುದುರೆಯನ್ನು ಸಾಕಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮೀ ಅವರು ಎತ್ತುಗಳಿಗೆ ಪೂಜೆ ಸಲ್ಲಿಸಿದ ಫೋಟೊವನ್ನು ಹಂಚಿಕೊಂಡಿದ್ದು, ಕುದುರೆಯನ್ನು ಮುದ್ದು ಮಾಡುತ್ತಿರುವ ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ವಿಡಿಯೊಗೆ ಅಡಿಬರಹವನ್ನು ಹಾಕಿರುವ ಅವರು ‘ನೀವು ಯಾರು ಎನ್ನುವುದನ್ನು ಪ್ರಾಣಿಗಳ ಕಣ್ಣುಗಳಲ್ಲಿ ಕಾಣಬಹುದು’ ಎಂದು ಹೇಳಿದ್ದಾರೆ. ಹಸುಗಳಿಗೆ ಪೂಜೆ ಸಲ್ಲಿಸಿರುವ ಫೋಟೊಗಳನ್ನು ಹಂಚಿಕೊಂಡು ಸಂಕ್ರಾಂತಿ ಶುಭಾಶಯ ಕೋರಿದ್ದಾರೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
2025ರ ಡಿ.11ರಂದು ದರ್ಶನ್ ಅಭಿನಯದ ಡೆವಿಲ್ ಚಿತ್ರ ತೆರೆಕಂಡು, ಯಶಸ್ವಿ ಪ್ರದರ್ಶನಗೊಂಡಿತ್ತು.
ದರ್ಶನ್ ಅವರ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿಯ ಆಚರಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.