ADVERTISEMENT

1,200 ತೆರೆಗಳನ್ನು ತುಂಬಲಿದೆ ವಿಜಯ ಸಂಕೇಶ್ವರ ಅವರ ಜೀವನಗಾಥೆ ‘ವಿಜಯಾನಂದ’

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 19:30 IST
Last Updated 8 ಡಿಸೆಂಬರ್ 2022, 19:30 IST
ವಿಜಯಾನಂದ            ನಿಹಾಲ್‌ ರಜಪೂತ್‌
ವಿಜಯಾನಂದ ನಿಹಾಲ್‌ ರಜಪೂತ್‌   

ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಗಾಥೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಜಯಾನಂದ’ ಇಂದು(ಡಿ. 9) ತೆರೆ ಕಾಣುತ್ತಿದೆ. ಜಗತ್ತಿನ 1,200 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

1976ರಲ್ಲಿ ಒಂದು ಟ್ರಕ್‌ನಿಂದ ಪ್ರಾರಂಭಿಸಿ, ಪ್ರತಿಷ್ಠಿತ ಲಾಜಿಸ್ಟಿಕ್ಸ್ ಕಂಪನಿ ವಿಆರ್‌ಎಲ್‌ ಸ್ಥಾಪಿಸಿದವಿಜಯ ಸಂಕೇಶ್ವರ ಹಾಗೂ ಅವರ ಮಗ ಆನಂದ ಸಂಕೇಶ್ವರ ಅವರು ನಡೆದು ಬಂದ ಹಾದಿಯ ಕಥೆ ಈ ಚಿತ್ರದಲ್ಲಿದೆ.ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ರಿಲೀಸ್‌ ಆಗಿದೆ.

ಈ ಹಿಂದೆ ‘ಟ್ರಂಕ್’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ನಟ ನಿಹಾಲ್ ರಜಪೂತ್ ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ನಟಿಸಿದ್ದಾರೆ. ವಿಜಯ ಸಂಕೇಶ್ವರ ಅವರ ಮೂರು ಶೇಡ್‌ಗಳಲ್ಲಿ ಅವರು ಇಲ್ಲಿ ಕಾಣಿಸಿಕೊಂಡಿದ್ದಾರೆ. ಅನಂತನಾಗ್, ವಿ. ರವಿಚಂದ್ರ, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್, ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್, ರಮೇಶ್ ಭಟ್ ಮುಂತಾದವರು ಚಿತ್ರದ ತಾರಾಗಣದಲ್ಲಿದ್ದಾರೆ.

ADVERTISEMENT

ವಿಆರ್‌ಎಲ್‌ ಪ್ರೊಡಕ್ಷನ್ಸ್‌ನಡಿ ಆನಂದ ಸಂಕೇಶ್ವರ ಅವರು ಈ ಚಿತ್ರ ನಿರ್ಮಿಸಿದ್ದಾರೆ. ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.