ADVERTISEMENT

ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ವಿಕಲ್ಪ’ ಟೀಸರ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 21:40 IST
Last Updated 4 ಜನವರಿ 2026, 21:40 IST
ನಾಗಶ್ರೀ ಹೆಬ್ಬಾರ್‌
ನಾಗಶ್ರೀ ಹೆಬ್ಬಾರ್‌   

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ವಿಕಲ್ಪ’ ಚಿತ್ರದ ಟೀಸರ್‌ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸೈಕಾಲಜಿಕಲ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಚಿತ್ರಕ್ಕೆ ಪೃಥ್ವಿರಾಜ್‌ ಪಾಟೀಲ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. 

‘ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು ಮತ್ತು ತಲ್ಲಣಗಳನ್ನು ಚಿತ್ರರೂಪದಲ್ಲಿ ತೆರೆಮೇಲೆ ತರುತ್ತಿದ್ದೇವೆ. ‘ವಿಕಲ್ಪ’ ಎಂದರೆ ವಾಸ್ತವ ಮತ್ತು ಕಲ್ಪನೆಗಳ ನಡುವಿನ ಒಂದು ಸ್ಥಿತಿ ಎಂದರ್ಥ. ಚಿತ್ರ ಸೆನ್ಸಾರ್‌ ಹಂತದಲ್ಲಿದೆ’ ಎಂದರು ನಿರ್ದೇಶಕ.

ಶ್ರೀಮತಿ ಇಂದಿರಾ ಶಿವಸ್ವಾಮಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರ್ದೇಶಕರೇ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ನಾಗಶ್ರೀ ಹೆಬ್ಬಾರ್‌, ಹರಿಣಿ ಶ್ರೀಕಾಂತ್‌, ಸಂಧ್ಯಾ ವಿನಾಯಕ್‌, ಗಣಪತಿ ವಡ್ಡಿನಗದ್ದೆ, ಗೋಡೆ ನಾರಾಯಣ ಹೆಗಡೆ ಮುಂತಾದವರು ಚಿತ್ರದಲ್ಲಿದ್ದಾರೆ. ಅಭಿರಾಮ್‌ ಗೌಡ ಛಾಯಾಚಿತ್ರಗ್ರಹಣ, ಸುರೇಶ್‌ ಆರುಮುಗಮ್‌ ಸಂಕಲನ, ಸಂವತ್ಸರ ಸಂಗೀತ ನಿರ್ದೇಶನವಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.