ADVERTISEMENT

ಸಿನಿ ಸುದ್ದಿ: ತೆರೆಗೆ ಬರಲು ಸಿದ್ಧವಾದ ‘ವಿಕಲ್ಪ’

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 23:30 IST
Last Updated 28 ಡಿಸೆಂಬರ್ 2025, 23:30 IST
ಪೃಥ್ವಿರಾಜ್‌ ಪಾಟೀಲ್‌
ಪೃಥ್ವಿರಾಜ್‌ ಪಾಟೀಲ್‌   

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ವಿಕಲ್ಪ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಸೈಕಾಲಜಿಕಲ್‌, ಥ್ರಿಲ್ಲರ್‌ ಕಥಾಹಂದರದ ಚಿತ್ರಕ್ಕೆ ಪೃಥ್ವಿರಾಜ್‌ ಪಾಟೀಲ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

‘ವಿಕಲ್ಪ’ ಎಂದರೆ ವಾಸ್ತವ ಮತ್ತು ಕಲ್ಪನೆಗಳ ನಡುವಿನ ಒಂದು ಸ್ಥಿತಿ ಎಂದರ್ಥ. ಇದೊಂದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕಥೆ ಎಂದೆನಿಸಿದರೂ, ಸಂಪೂರ್ಣ ಥ್ರಿಲ್ಲರ್‌ ಚಿತ್ರ. ಜತೆಗೆ ನವಿರಾದ ಹಾಸ್ಯ ಮತ್ತು ಮನೋರಂಜನೆಗೆ ಹೆಚ್ಚಿನ ಒತ್ತು ಕೊಟ್ಟು ಇಡೀ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಈ ಚಿತ್ರಕ್ಕೆ ಚಿತ್ರದ ಕಥೆಯೆ ಹೀರೋ. ಇಲ್ಲಿ ಪ್ರತಿ ಪಾತ್ರಗಳೂ ಮಾತನಾಡುತ್ತವೆ. ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಶೀಘ್ರದಲ್ಲಿ ತೆರೆಗೆ ಬರಲಿದೆ’ ಎನ್ನುತ್ತಾರೆ ನಿರ್ದೇಶಕ.

ಬೆಂಗಳೂರು, ತೀರ್ಥಹಳ್ಳಿ, ಸಾಗರ, ಶಿರಸಿ, ಕುಂದಾಪುರ, ಯಲ್ಲಾಪುರ ಸೇರಿದಂತೆ ಸಿಂಗಪುರ, ನೆದರ್ಲೆಂಡ್‌ಗಳಲ್ಲಿಯೂ ಚಿತ್ರೀಕರಣ ಮಾಡಲಾಗಿದೆ. ಪೃಥ್ವಿರಾಜ್‌ ಪಾಟೀಲ್‌, ನಾಗಶ್ರೀ ಹೆಬ್ಬಾರ್‌, ಸಂಧ್ಯಾ ವಿನಾಯಕ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹರಿಣಿ ಶ್ರೀಕಾಂತ್‌ ವಿಶೇಷವಾದ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಗಣಪತಿ ಹಿತ್ತಲಕೈ, ಪ್ರಜ್ಞಾ ಗಣಪತಿ, ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. 

ADVERTISEMENT

ಸಂವತ್ಸರ ಸಂಗೀತ ಸಂಯೋಜಿಸಿದ್ದು, ಪೃಥ್ವಿರಾಜ್‌ ಪಾಟಿಲ್‌ ಮತ್ತು ಕೌಂಡಿನ್ಯ ಕುಡ್ಲುತೋಟ ಸಾಹಿತ್ಯವಿದೆ. ಅಭಿರಾಮ್‌ ಗೌಡ ಛಾಯಾಚಿತ್ರಗ್ರಹಣ, ಸುರೇಶ್‌ ಆರುಮುಗಮ್‌ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.