ADVERTISEMENT

ಕಿಚ್ಚ ಸುದೀಪ್‌ ‘ವಿಕ್ರಾಂತ್‌ ರೋಣ’ ಬಿಡುಗಡೆ ದಿನಾಂಕ ಘೋಷಣೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 9:21 IST
Last Updated 7 ಡಿಸೆಂಬರ್ 2021, 9:21 IST
ವಿಕ್ರಾಂತ್‌ ರೋಣ ಪೋಸ್ಟರ್‌
ವಿಕ್ರಾಂತ್‌ ರೋಣ ಪೋಸ್ಟರ್‌   

ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ಬಜೆಟ್‌ ಸಿನಿಮಾ ‘ವಿಕ್ರಾಂತ್‌ ರೋಣ’ 2022ರ ಫೆ.24ಕ್ಕೆ ತೆರೆಕಾಣಲಿದೆ.

ಮಂಗಳವಾರ ಚಿತ್ರತಂಡವು ರಿಲೀಸ್‌ ದಿನಾಂಕವನ್ನು ಘೋಷಿಸಿದೆ. ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ ಯಲ್ಲಿ ತೆರೆಕಾಣಲಿದೆ. ಚಿತ್ರದಲ್ಲಿ ಸ್ವತಃ ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್‌ ಮಾಡಿದ್ದಾರೆ. ಕಳೆದ ಆಗಸ್ಟ್‌ 19ರಂದೇ ತೆರೆಯ ಮೇಲೆ ಬರಬೇಕಿದ್ದ ಈ ಸಿನಿಮಾ, ಕೋವಿಡ್‌ ಲಾಕ್‌ಡೌನ್‌ ಕಾರಣದಿಂದ ಮುಂದೂಡಲ್ಪಟ್ಟಿತ್ತು. ದುಬೈನಲ್ಲಿರುವ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್‌ ಖಲೀಫಾ ಮೇಲೆ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿ, ಚಿತ್ರವು ವಿಶ್ವದ ಗಮನಸೆಳೆದಿತ್ತು.

ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈ ಚಿತ್ರದ ಮುಖಾಂತರ ಚಂದನವನಕ್ಕೆ ಹೆಜ್ಜೆ ಇಟ್ಟಿದ್ದು,ರಕೇಲ್‌ ಡಿಕೋಸ್ಟ ಉರ್ಫ್‌ ‘ಗಡಂಗ್‌ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಿದ್ದಾರೆ. ಹಿಂದಿ ಹಾಗೂ ಇತರೆ ಭಾಷೆಯಲ್ಲಿ ಪ್ರಮೋಷನ್ಸ್‌ ಸೇರಿ ಚಿತ್ರದ ಬಜೆಟ್‌ ₹100 ಕೋಟಿ ದಾಟಿದೆ ಎಂದು ಇತ್ತೀಚೆಗೆ ಚಿತ್ರದ ನಿರ್ಮಾಪಕ ಜಾಕ್‌ ಮಂಜು ತಿಳಿಸಿದ್ದರು. ಜೀ ಸ್ಟೂಡಿಯೊಸ್‌ ಹಾಗೂ ಕಿಚ್ಚ ಕ್ರಿಯೇಷನ್ಸ್‌ನಡಿ ಜಾಕ್‌ ಮಂಜು ಅವರ ಶಾಲಿನಿ ಆರ್ಟ್ಸ್‌ ಈ ಚಿತ್ರವನ್ನು ವಿತರಣೆ ಮಾಡಲಿದೆ. ಚಿತ್ರಕ್ಕೆ ಬಿ.ಅಜನೀಶ್‌ ಲೋಕನಾಥ್‌ ಸಂಗೀತವಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.