ADVERTISEMENT

ಕೆಆರ್‌ಜಿಯಿಂದ ‘ಪೆಪೆ’ ಸಿನಿಮಾ ವಿತರಣೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 2:30 IST
Last Updated 14 ಆಗಸ್ಟ್ 2024, 2:30 IST
ವಿನಯ್‌ ರಾಜ್‌ಕುಮಾರ್‌ 
ವಿನಯ್‌ ರಾಜ್‌ಕುಮಾರ್‌    

ನಟ ವಿನಯ್‌ ರಾಜ್‌ಕುಮಾರ್‌ ನಟನೆಯ ‘ಪೆಪೆ’ ಸಿನಿಮಾ ರಿಲೀಸ್‌ಗೆ ಸಜ್ಜಾಗುತ್ತಿದ್ದು, ಚಿತ್ರವನ್ನು ಕೆಆರ್‌ಜಿ ಸ್ಟುಡಿಯೊಸ್‌ ಸಂಸ್ಥೆ ರಾಜ್ಯದಲ್ಲಿ ವಿತರಣೆ ಮಾಡಲಿದೆ.

ಇತ್ತೀಚೆಗಷ್ಟೇ ಪ್ರಚಾರದ ಅಂಗವಾಗಿ ಚಿತ್ರತಂಡ ‘ಪೆಪೆ ಪ್ರಿಸೆಟ್‌’ ಹೆಸರಿನ ಹಾಡೊಂದನ್ನು ಬಿಡುಗಡೆ ಮಾಡಿತ್ತು. ಚಿತ್ರಕ್ಕೆ ಸೆನ್ಸಾರ್‌ ಮಂಡಳಿಯು ‘ಎ’ ಪ್ರಮಾಣಪತ್ರ ನೀಡಿದ್ದು, ವಿನಯ್ ರಾಜ್‌ಕುಮಾರ್‌ ‘ಪೆಪೆ’ ಸಿನಿಮಾದಲ್ಲಿ ಮಾಸ್ ಅವತಾರ ತಾಳಿದ್ದಾರೆ.

ನಿರ್ದೇಶಕ ಶ್ರೀಲೇಶ್ ಎಸ್. ನಾಯರ್ ನಿರ್ದೇಶನದಲ್ಲಿ ವಿನಯ್ ರಗಡ್‌ ಲುಕ್‌ನಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ. ಸಿನಿಮಾದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಮುಂತಾದವರು ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಛಾಯಾಚಿತ್ರಗ್ರಹಣ, ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನವಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.