ADVERTISEMENT

Kannada Cinema | ‘ಫೈಟರ್‌’ ಆದ ಮರಿ ಟೈಗರ್‌!

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2023, 18:07 IST
Last Updated 29 ಆಗಸ್ಟ್ 2023, 18:07 IST
ಪಾವನ, ವಿನೋದ್ ಪ್ರಭಾಕರ್‌ ಹಾಗೂ ಲೇಖ ಚಂದ್ರ 
ಪಾವನ, ವಿನೋದ್ ಪ್ರಭಾಕರ್‌ ಹಾಗೂ ಲೇಖ ಚಂದ್ರ    

‘ರಾಬರ್ಟ್‌’ ಸಿನಿಮಾ ಬಳಿಕ ನಟ ವಿನೋದ್ ಪ್ರಭಾಕರ್‌ ಸಾಲು ಸಾಲು ಸಿನಿಮಾಗಳಿಗೆ ಹಸಿರು ನಿಶಾನೆ ತೋರುತ್ತಿದ್ದಾರೆ. ಮರಿ ಟೈಗರ್‌ ಇದೀಗ ‘ಫೈಟರ್‌’ ಆಗಿ ತೆರೆ ಮೇಲೆ ಬರಲಿದ್ದಾರೆ. 

ನೂತನ್‌ ಉಮೇಶ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಸೋಮಶೇಖರ್‌ ಕಟ್ಟಿಗೇನಹಳ್ಳಿ ನಿರ್ಮಾಣ ಮಾಡಿರುವ ಈ ಚಿತ್ರ ಅಕ್ಟೋಬರ್‌ನಲ್ಲಿ ತೆರೆಗೆ ಬರಲು ಸಜ್ಜಾಗುತ್ತಿದೆ. 

‘ಸದ್ಯದಲ್ಲೇ ಚಿತ್ರದ ಹಾಡುಗಳು ಹಾಗೂ ಟ್ರೈಲರ್‌ ಬಿಡುಗಡೆಯಾಗಲಿದೆ. ‘ಫೈಟರ್’ ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ ‘ಫೈಟರ್’ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು.‌ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ’ ಎನ್ನುತ್ತಾರೆ ಉಮೇಶ್‌. 

ADVERTISEMENT

ಚಿತ್ರಕ್ಕೆ ಗುರುಕಿರಣ್‌ ಅವರ ಸಂಗೀತ ನಿರ್ದೇಶನವಿದ್ದು, ಪಾವನ ಹಾಗೂ ಲೇಖ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ. ನಟಿ ನಿರೋಶ ಈ ಚಿತ್ರದ ಮೂಲಕ ಹಲವು ವರ್ಷಗಳ ಬಳಿಕ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಥ್ರಿಲ್ಲರ್‌ ಮಂಜು ಚಿತ್ರದ ಸಾಹಸ ನಿರ್ದೇಶನ ಮಾಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.