ADVERTISEMENT

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ನಟ ಸೋನು ಸೂದ್‌ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 7:50 IST
Last Updated 22 ಫೆಬ್ರುವರಿ 2022, 7:50 IST
ಸೋನು ಸೂದ್‌
ಸೋನು ಸೂದ್‌   

ಬಾಲಿವುಡ್‌ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನು ಸೂದ್‌ ವಿರುದ್ಧ ಪಂಜಾಬ್‌ನಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋದಡಿಯಲ್ಲಿ ಸೋನು ಸೂದ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಮೊಗಾ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದೆ.

ಸಹೋದರಿ ಮಾಳವಿಕಾ ಸೂದ್ ಸಾಚಾರ್ ಅವರು ಮೊಗಾ ವಿಧಾನಸಭ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಚುನಾವಣೆ ದಿನ ಅವರ ಪರವಾಗಿ ಇಲ್ಲಿನಲಂಧೇಕ್ ಹಳ್ಳಿಯಲ್ಲಿ ಸೋನು ಸೂದ್‌ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ADVERTISEMENT

ಸೋನು ಸೂದ್‌ ತನ್ನ ವರ್ಚಸ್ಸನ್ನು ಬಳಸಿಕೊಂಡು ಮತದಾರರ ಮೇಲೆ ಪ್ರಭಾವ ಬೀರಲು ವಿವಿಧ ಮತಗಟ್ಟೆಗಳಿಗೆಭೇಟಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.