ADVERTISEMENT

ಮೊದಲ ನೋಟದಲ್ಲಿ ‘ವಿರಾಟಪುರದ ವಿರಾಗಿ’

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2022, 12:43 IST
Last Updated 4 ಡಿಸೆಂಬರ್ 2022, 12:43 IST
‘ವಿರಾಟಪುರದ ವಿರಾಗಿ’ ಫಸ್ಟ್‌ಲುಕ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ, ಹಾವೇರಿಯ ಸದಾಶಿವ ಸ್ವಾಮೀಜಿ, ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಘನಬಸವ ಅಮರೇಶ್ವರ ಸ್ವಾಮೀಜಿ, ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ನಿರ್ದೇಶಕ ಗಿರೀಶ್ ಕಾಸರವಳ್ಳಿ, ಮಾಜಿ ಸಚಿವ, ಅಲ್ಲಮ ವೀರಭದ್ರಪ್ಪ ಇದ್ದರು.

ಆಧುನಿಕ ಬಸವಣ್ಣ ಎಂದೇ ಖ್ಯಾತರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ‘ವಿರಾಟಪುರ ವಿರಾಗಿ’ ಚಿತ್ರದ ಮೊದಲ ನೋಟ (ಫಸ್ಟ್‌ ಲುಕ್‌) ಇತ್ತೀಚಿಗೆ ಬಿಡುಗಡೆಯಾಯಿತು.

ಬಿ.ಎಸ್ ಲಿಂಗದೇವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.‌ ‘ಸಮಾಧಾನ’ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಕುಮಾರ ಶಿವಯೋಗಿ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಆಭಿನಯಿಸಿದ್ದಾರೆ. ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರರಾದ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಶೋಕ್ ವಿ. ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನವಿದೆ ಎಂದರು ನಿರ್ದೇಶಕ ಲಿಂಗದೇವರು.

ADVERTISEMENT

ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರವನ್ನು ಪ್ರತಿಯೊಬ್ಬರೂ ನೋಡಬೇಕು. ಲಿಂಗ ದೇವರು ನಿರ್ದೇಶನದ ಈ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ರಾಜ್ಯದ ಐದು ಕಡೆಗಳಿಂದ ರಥಯಾತ್ರೆ ನಡೆಯಲಿದೆ ಎಂದು ಜಡೆ ಅಮರೇಶ್ವರ ಶ್ರೀಗಳು ತಿಳಿಸಿದರು.

ಫಸ್ಟ್‌ಲುಕ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ, ಹಾವೇರಿಯ ಸದಾಶಿವ ಸ್ವಾಮೀಜಿ, ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಘನಬಸವ ಅಮರೇಶ್ವರ ಸ್ವಾಮೀಜಿ, ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ನಿರ್ದೇಶಕ ಗಿರೀಶ್ ಕಾಸರವಳ್ಳಿ, ಮಾಜಿ ಸಚಿವ, ಅಲ್ಲಮ ವೀರಭದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.