ಚಿತ್ರ ಕೃಪೆ: Vishal@VishalKOfficial
ತಮಿಳು ನಟ ವಿಶಾಲ್ ಅವರು ನಟಿ ಸಾಯಿ ಧನ್ಸಿಕಾ ಅವರೊಂದಿಗೆ ತಮ್ಮ ಜನ್ಮದಿನದಂದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹುಟ್ಟು ಹಬ್ಬದಂದು ನಿಶ್ಚಿತಾರ್ಥದ ಫೋಟೊ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಕುಟುಂಬ ಸದಸ್ಯರು ಹಾಗೂ ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ಉಂಗುರ ಬದಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಹುಟ್ಟುಹಬ್ಬದಂದು ನನಗೆ ಶುಭ ಹಾರೈಸಿ ಆಶೀರ್ವದಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು. ನನ್ನ ಹಾಗೂ ಸಾಯಿ ಧನ್ಶಿಕಾ ನಿಶ್ಚಿತಾರ್ಥದ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ತಮ್ಮ X ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.