ADVERTISEMENT

ವಿಷ್ಣುವರ್ಧನ್ ಜನ್ಮದಿನಾಚರಣೆ: ಕುಟುಂಬಸ್ಥರು, ಅಭಿಮಾನಿಗಳಿಂದ ಪೂಜೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 6:06 IST
Last Updated 18 ಸೆಪ್ಟೆಂಬರ್ 2025, 6:06 IST
   

ಮೈಸೂರು: ನಟ ವಿಷ್ಣುವರ್ಧನ್ 75ನೇ ಹುಟ್ಟುಹಬ್ಬದ ಅಂಗವಾಗಿ ಉದ್ಭೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕಕ್ಕೆ ಆಗಮಿಸಿದ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಹಾಗೂ ಅಭಿಮಾನಿಗಳು ವಿಷ್ಣುವರ್ಧನ್ ಪ್ರತಿಮೆಗೆ ಪೂಜೆ ಸಲ್ಲಿಸಿದರು.

ಗುರುವಾರ ಬೆಳಿಗ್ಗಿನಿಂದಲೇ ತಂಡೋಪ ತಂಡವಾಗಿ ನೂರಾರು ಅಭಿಮಾನಿಗಳು ಸ್ಮಾರಕಕ್ಕೆ ಆಗಮಿಸಿದ್ದಾರೆ. ನೆಚ್ಚಿನ ನಟನ ರೀತಿಯಲ್ಲೇ ವೇಷ ಭೂಷಣ ತೊಟ್ಟು, ಜಯಘೋಷ ಕೂಗಿ ಸಂಭ್ರಮಿಸಿದರು.

ಆಟೊಗಳಲ್ಲಿ ಕನ್ನಡದ ಬಾವುಟ ಕಟ್ಟಿ, ವಿಷ್ಣುವರ್ಧನ್ ಭಾವಚಿತ್ರವುಳ್ಳ ಸ್ಟಿಕ್ಕರ್ ಗಳಿಂದ ಸಿಂಗರಿಸಲಾಗಿತ್ತು.

ADVERTISEMENT

ವಿಷ್ಣುವರ್ಧನ್ ಅಭಿಮಾನಿಗಳ ಸಂಘಗಳ ಒಕ್ಕೂಟವು ಅಭಿಮಾನಿಗಳಿಗೆ ಹೋಳಿಗೆ ಊಟ ವಿತರಿಸಿತು. ಅಭಿಮಾನಿಗಳು ರಕ್ತದಾನ ಮಾಡಿದರು. ದಿನವಿಡೀ ವಿಷ್ಣುವರ್ಧನ್ ಅಭಿನಯದ ಚಿತ್ರಗೀತೆಗಳ ಗಾಯನ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.