ADVERTISEMENT

ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅಗಲಿಕೆಗೆ ಗಣ್ಯರ ಕಂಬನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಸೆಪ್ಟೆಂಬರ್ 2020, 9:51 IST
Last Updated 25 ಸೆಪ್ಟೆಂಬರ್ 2020, 9:51 IST
   

ಬೆಂಗಳೂರು: ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್,ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

'ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯಿಂದ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಭಾರತದಾದ್ಯಂತ ಮನೆ ಮಾತಾಗಿದ್ದವರು, ಹಲವು ದಶಕಗಳಿಂದ ಅವರ ಮಧುರ ಧ್ವನಿ ಮತ್ತು ಸಂಗೀತ ಕೇಳುಗರನ್ನು ಆನಂದ ಪಡಿಸಿದೆ....' ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿ ಟ್ವೀಟಿಸಿದ್ದಾರೆ.

ADVERTISEMENT

'ಭಾರತದ ಸಂಗೀತ ಅದರ ಅತ್ಯಂತ ಮಧುರವಾದ ಧ್ವನಿಯನ್ನು ಕಳೆದು ಕೊಂಡಿದೆ. 'ಪಾಡುಂ ನೀಲ' ಅಥವಾ 'ಹಾಡುವ ಚಂದ್ರ' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದರು. ಪದ್ಮಭೂಷಣ ಹಾಗೂ ಹಲವು ರಾಷ್ಟ್ರ ಪ್ರಶಸ್ತಿಗಳ ಗೌರವ ಅವರಿಗೆ ಸಂದಿವೆ...' ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿಕೊಳ್ಳಲಾಗಿದೆ.

‘ಸಂಗೀತ ದಂತಕತೆ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ನಿಧನದಿಂದ ಆಘಾತವಾಗಿದೆ. ಅವರ ಅಗಲುವಿಕೆಯಿಂದ ಸಂಗೀತ ಜಗತ್ತಿನಲ್ಲಿ ಸೃಷ್ಟಿಯಾಗಿರುವ ನಿರ್ವಾತ ತುಂಬಲು ಅಸಾಧ್ಯ’ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.

‘ಎಸ್‌.ಪಿ.ಬಾಲಸುಬ್ರಹ್ಮಣ್ಯಂ ನಿಧನದಿಂದ ಬಹಳ ನೋವಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಂಗೀತದ ಉತ್ತುಂಗ ತಲುಪುವುದು ಒಂದು ಅದ್ಭುತ ಸಾಧನೆ. ಅವರ ಅಗಲುವಿಕೆ ನಮ್ಮ ದೇಶಕ್ಕೆ, ಅದರಲ್ಲೂ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ’ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

‘ಎಲ್ಲವೂ ನಾಶವಾಯಿತು’ ಎಂದು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್ ಟ್ವೀಟ್ ಮಾಡಿದ್ದಾರೆ.

‘ಎಸ್‌.ಪಿ.ಬಾಲಸುಬ್ರಹ್ಮಣ್ಯಂ ನಿಧನದಿಂದ ಅತೀವ ದುಃಖವಾಗಿದೆ. ಅವರ ಧ್ವನಿ ಎಂದೆಂದಿಗೂ ನಮ್ಮ ಹೃದಯದಲ್ಲಿ ಉಳಿಯಲಿದೆ’ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.