'ವಾರ್ 2' ಚಿತ್ರದ ಟ್ರೇಲರ್ ಬಿಡುಗಡೆ
(ಚಿತ್ರ–@tarak9999)
ಬೆಂಗಳೂರು: ತೆಲುಗು ನಟ ಜೂನಿಯರ್ ಎನ್‌ಟಿಆರ್ ಹಾಗೂ ಬಾಲಿವುಡ್ ನಟ ಹೃತಿಕ್ ರೋಷನ್ ಜತೆಗೂಡಿ ಅಭಿನಯಿಸಿರುವ ‘ವಾರ್ 2‘ ಚಿತ್ರದ ಟ್ರೇಲರ್ ಇಂದು (ಶುಕ್ರವಾರ) ಬಿಡುಗಡೆಯಾಗಿದೆ.
2019ರಲ್ಲಿ ಹೃತಿಕ್ ರೋಷನ್ ಅಭಿನಯದ ‘ವಾರ್’ ಸಿನಿಮಾ ತೆರೆಕಂಡು ಭರ್ಜರಿ ಯಶಸ್ಸು ಗಳಿಸಿತ್ತು. ಇದರ ಮುಂದುವರಿದ ಭಾಗ ವಾರ್–2 ಚಿತ್ರವಾಗಿದೆ.
ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ವಿಲನ್ ಆಗಿ ಗಮನ ಸೆಳೆದಿದ್ದಾರೆ. ಇಲ್ಲಿಯವರೆಗೂ ನಾಯಕನಾಗಿ ಕಾಣಿಸಿಕೊಂಡಿದ್ದ ಎನ್‌ಟಿಆರ್, ಮೊದಲ ಸಲ ಖಡಕ್ ಖಳ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ರಾ ಏಜೆಂಟ್ ಪಾತ್ರದಲ್ಲಿ ಹೃತಿಕ್ ರೋಷನ್ ಕಾಣಿಸಿಕೊಂಡಿದ್ದು, ಕಿಯಾರಾ ಅಡ್ವಾಣಿ ಅವರಿಗೆ ಜೋಡಿಯಾಗಿದ್ದಾರೆ.
ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ ಆಗಸ್ಟ್ 14ರಂದು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತೆರೆಕಾಣಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.