ADVERTISEMENT

ಮದುವೆ ಸಂಭ್ರಮ: ಬಿಳಿ ಬಣ್ಣದ ಉಡುಗೆಯಲ್ಲಿ ಮಿಂಚಿದ ಕಿಯಾರಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2023, 11:39 IST
Last Updated 4 ಫೆಬ್ರುವರಿ 2023, 11:39 IST
ಜೈಸಲ್ಮೇರ್‌ನಲ್ಲಿ ಕಾಣಿಸಿಕೊಂಡ ಕಿಯಾರಾ(ಚಿತ್ರ ಕೃಪೆ): @IndiaToday
ಜೈಸಲ್ಮೇರ್‌ನಲ್ಲಿ ಕಾಣಿಸಿಕೊಂಡ ಕಿಯಾರಾ(ಚಿತ್ರ ಕೃಪೆ): @IndiaToday   

ಮುಂಬೈ: ಬಾಲಿವುಡ್ ಕ್ಯೂಟ್‌ ಜೋಡಿ ಎಂದೇ ಕರೆಸಿಕೊಳ್ಳುವ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಇಂದಿನಿಂದ ವಿವಾಹ ಪೂರ್ವ ಕಾರ್ಯಕ್ರಮಗಳು ರಾಜಸ್ತಾನದ ಜೈಸಲ್ಮೇರ್‌ನಲ್ಲಿರುವ ಐಷಾರಾಮಿ ಸೂರ್ಯಘರ್ ಹೋಟೆಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಕಿಯಾರಾ ಜೈಸಲ್ಮೇರ್‌ನಲ್ಲಿ, ಬಿಳಿ ಮತ್ತು ಗುಲಾಬಿದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಇಂದು ಸಂಗೀತಾ, ಮೆಹಂದಿ ಕಾರ್ಯಕ್ರಮಗಳು ನಡೆಯಲಿದ್ದು, ಫೆ.12ರಂದು ಆರತಕ್ಷತೆ ಜರುಗಲಿದೆ. ಮದುವೆಯಲ್ಲಿ ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಭಾಗಿಯಾಗಲಿದ್ದಾರೆ.

ADVERTISEMENT

ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ವಿವಾಹವು ಅವರ ಅಭಿಮಾನಿಗಳಲ್ಲಿ ಸಂಭ್ರಮ ಹೆಚ್ಚಿಸಿದೆ. ಕಳೆದ ಸುಮಾರು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಕೊನೆಗೂ ಮದುವೆಯಾಗುತ್ತಿದ್ದಾರೆ.

ಟ್ಟಿಟರ್‌ನಲ್ಲಿ ಈ ಜೋಡಿಯ ಮದುವೆಗೆ ಸಂಬಂಧಿಸಿದ ಹ್ಯಾಶ್ ಟ್ಯಾಗ್‌ಗಳು ಟ್ರೆಂಟ್‌ ಆಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.