ADVERTISEMENT

‘ವೆಡ್ಡಿಂಗ್ ಗಿಫ್ಟ್’: ಡಬ್ಬಿಂಗ್ ಸ್ಟುಡಿಯೋದಲ್ಲಿ ಲಾಯರ್‌ ಪ್ರೇಮಾ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2022, 4:52 IST
Last Updated 2 ಫೆಬ್ರುವರಿ 2022, 4:52 IST
ಡಬ್ಬಿಂಗ್‌ ಸ್ಟುಡಿಯೋದಲ್ಲಿ ನಟಿ ಪ್ರೇಮ 
ಡಬ್ಬಿಂಗ್‌ ಸ್ಟುಡಿಯೋದಲ್ಲಿ ನಟಿ ಪ್ರೇಮ    

ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ ‘ವೆಡ್ಡಿಂಗ್ ಗಿಫ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಾತಿನ ಜೋಡಣೆ ಸಹ ಮುಕ್ತಾಯವಾಗಿದೆ.

ನಟಿ ಪ್ರೇಮ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಅವರ ಅಭಿನಯದ ಭಾಗಕ್ಕೆ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಡಬ್ಬಿಂಗ್ ಮಾಡಿದ್ದಾರೆ.

‘ನಾನು ಇದೇ ಮೊದಲ ಬಾರಿಗೆ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕ ವಿಕ್ರಂಪ್ರಭು ಅವರು ಉತ್ತಮ ಕಥೆ ಮಾಡಿದ್ದಾರೆ. ನಾನು ಕೋರ್ಟಿನಲ್ಲಿ ಕೆಲವು ಕಲಾಪಗಳನ್ನು ನೋಡಿದ್ದೇನೆ. ಅಲ್ಲಿ ವಕೀಲರು ಮಾತನಾಡುವುದನ್ನು ಹತ್ತಿರದಿಂದ ಕಂಡ ನನಗೆ ಈ ಪಾತ್ರ ಮಾಡಲು ಅನುಕೂಲವಾಯಿತು’ ಎಂದರು ಪ್ರೇಮಾ.

ADVERTISEMENT

‘ಈಗಿನ ಕಾಲದ ಕೆಲವು ಕಾನೂನುಗಳನ್ನು ಕೆಲವರು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಎಂಬ ವಿಷಯ ಇಟ್ಟುಕೊಂಡು ಈ ಚಿತ್ರ ನಿರ್ದೇಶನ ಮಾಡಿದ್ದೇನೆ. ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ನಿರ್ದೇಶಕ ವಿಕ್ರಂಪ್ರಭು.

ನಿಶಾನ್ ನಾಣಯ್ಯ - ಸೋನುಗೌಡ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ಪವಿತ್ರಲೋಕೇಶ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ.

ಬಾಲಚಂದ್ರ ಪ್ರಭು ಸಂಗೀತ ನಿರ್ದೇಶನ, ಉದಯಲೀಲಾ ಛಾಯಾಗ್ರಹಣ ಹಾಗೂ ವಿಜೇತ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.