ADVERTISEMENT

ಚಂದ್ರಯಾನ–3ರ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ: ಚೇತನ್‌ ಅಹಿಂಸಾ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಆಗಸ್ಟ್ 2023, 5:01 IST
Last Updated 24 ಆಗಸ್ಟ್ 2023, 5:01 IST
ನಟ ಚೇತನ್ ಅಹಿಂಸಾ ಸಂಗ್ರಹ ಚಿತ್ರ
ನಟ ಚೇತನ್ ಅಹಿಂಸಾ ಸಂಗ್ರಹ ಚಿತ್ರ    

ಬೆಂಗಳೂರು: ಚಂದ್ರಯಾನ–3 ಯೋಜನೆಯ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್‌ ಅಹಿಂಸಾ ಪ್ರಶ್ನಿಸಿದ್ದಾರೆ.

ಚಂದ್ರಯಾನ–3ರ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಟ್ವಿಟರ್) ಪೋಸ್ಟ್‌ ಹಂಚಿಕೊಂಡಿರುವ ನಟ ಚೇತನ್‌ ಅಹಿಂಸಾ, ‘ಚಂದ್ರಯಾನ–3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ. ಈ ಯಶಸ್ಸಿನ ಕೀರ್ತಿ(ಗುರುತು) ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಸ್ಥೆ( ಇಸ್ರೊ) ಚಂದ್ರಯಾನ–3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಲಾಗಿತ್ತು. ಲ್ಯಾಂಡ್‌ ರೋವರ್‌ ಚಂದ್ರನ ಮೇಲೆ ಬುಧವಾರ (ಆಗಸ್ಟ್‌ 23 ) ಯಶಸ್ವಿಯಾಗಿ ಇಳಿದಿದೆ.

ADVERTISEMENT

ಚೇತನ್‌ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.