ADVERTISEMENT

ಮೂರನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಐರಾ ಯಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಡಿಸೆಂಬರ್ 2021, 6:43 IST
Last Updated 2 ಡಿಸೆಂಬರ್ 2021, 6:43 IST
ಯಶ್–ರಾಧಿಕಾ ದಂಪತಿ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ
ಯಶ್–ರಾಧಿಕಾ ದಂಪತಿ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ   

ಬೆಂಗಳೂರು: ರಾಧಿಕಾ ಪಂಡಿತ್–ಯಶ್ ದಂಪತಿ ಪುತ್ರಿ ಐರಾ, ಗುರುವಾರ ಡಿಸೆಂಬರ್ 2ರಂದು ಮೂರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಮಗಳ ಹುಟ್ಟುಹಬ್ಬದ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಐರಾ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವ ಫೋಟೊ ಒಂದನ್ನು ಪೋಸ್ಟ್ ಮಾಡಿದ್ದಾರೆ.

ನಿನ್ನ ಕೈಯನ್ನು ಹಿಡಿದಿರಲು ನಾನು ಸದಾ ಜತೆಗಿರುತ್ತೇನೆ, ನಮ್ಮ ದೇವತೆಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಹಾರೈಸಿದ್ದಾರೆ.

ಐರಾ ಸಾಮಾಜಿಕ ತಾಣಗಳಲ್ಲಿ ಈಗಾಗಲೇ ಸಂಚಲನ ಸೃಷ್ಟಿಸಿದ್ದಾರೆ.

ಐರಾ ಮಗುವಾಗಿದ್ದ ಸಮಯದಿಂದ ತೊಡಗಿ, ಈಗಲೂ ಯಶ್ ಮತ್ತು ರಾಧಿಕಾ, ಆಕೆಯ ತುಂಟಾಟಗಳ ಫೋಟೊ ಮತ್ತು ವಿಡಿಯೊಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.