
ಯಶ್ ಹಾಗೂ ಅವರ ಸಂದೇಶ
ಬೆಂಗಳೂರು: 'ಈ ಜನ್ಮದಿನದಂದು ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ' ಎಂದು ನಟ 'ರಾಕಿಂಗ್ ಸ್ಟಾರ್' ಯಶ್ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ್ದಾರೆ.
ನಾಳೆ (ಜನವರಿ 8) ಯಶ್ ಅವರ ಜನ್ಮದಿನ.
ಟಾಕ್ಸಿಕ್ ಸಿನಿಮಾ ಸಂಬಂಧಿತ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅವರು, ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸಂದೇಶ ರವಾನಿಸಿದ್ದಾರೆ.
'ನೀವು ನನ್ನನ್ನು ಭೇಟಿಯಾಗಲು ಕೆಲವು ವರ್ಷಗಳಿಂದ ಕಾತರದಿಂದ ಕಾಯುತ್ತಿದ್ದೀರಿ ಎಂಬುದು ಚೆನ್ನಾಗಿ ಗೊತ್ತು. ನನಗೂ ನಿಮ್ಮನ್ನೆಲ್ಲ ಭೇಟಿಯಾಗುವ ಹಂಬಲವಿದೆ. ಈ ಜನ್ಮದಿನದಂದು ನಿಮ್ಮನ್ನೆಲ್ಲ ಭೇಟಿಯಾಗಬೇಕೆಂದು ನಾನೂ ಬಯಸಿದ್ದೆ. ಆದರೆ, ಇದೇ ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗಬೇಕಿದೆ. ಅಷ್ಟರೊಳಗೆ ಅದಕ್ಕೆ ಸಂಬಂಧಿಸಿದ ಕೆಲಸಗಳನ್ನು ಮುಗಿಸಬೇಕಿದೆ. ಹಾಗಾಗಿ, ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಆಗುತ್ತಿಲ್ಲ. ಶೀಘ್ರದಲ್ಲೇ ಇನ್ನೂ ದೊಡ್ಡ ಮಟ್ಟದಲ್ಲಿ ಭೇಟಿಯಾಗೋಣ. ಅಲ್ಲಿಯವರೆಗೆ ನೀವು ಕಳುಹಿಸುವ ಸಂದೇಶಗಳನ್ನು ಓದುತ್ತೇನೆ. ನಿಮ್ಮ ಪ್ರೀತಿಯನ್ನು ಸದಾ ಸ್ಮರಿಸುತ್ತೇನೆ' ಎಂದು ತಮ್ಮ ಪ್ರೀತಿಯ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಯಶ್ ಅವರು 'ಟಾಕ್ಸಿಕ್' ಸಿನಿಮಾ ಮೂಲಕ 2022ರ ನಂತರ ಇದೇ ಮೊದಲ ಬಾರಿಗೆ ಬೆಳ್ಳಿ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ನಯನತಾರ, ಕಿಯಾರಾ ಅಡ್ವಾನಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ, ಅಕ್ಷಯ್ ಒಬೆರಾಯ್, ಸುದೇವ್ ನಾಯರ್ ಸೇರಿದಂತೆ ತಾರಾ ನಟರ ದಂಡೇ ಇದೆ. ಚಿತ್ರಕಥೆ ಬರವಣಿಗೆಯಲ್ಲಿ ಗೀತು ಅವರೊಂದಿಗೆ ಯಶ್ ಕೂಡ ಕೈ ಜೋಡಿಸಿದ್ದಾರೆ.
ಕೆವಿಎನ್ ಪ್ರೋಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಶನ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ.
ಯಶ್ ಅವರ ಇನ್‌ಸ್ಟಾಗ್ರಾಂ ಸ್ಟೋರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.