
ಪ್ರಶಾಂತ್ ನೀಲ್, ಯಶ್, ತರುಣ್ ಸುಧೀರ್
ಚಿತ್ರ: ಇನ್‌ಸ್ಟಾಗ್ರಾಂ
ಇಂದು ರಾಕಿಂಗ್ ಸ್ಟಾರ್ ಯಶ್ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ 'ಟಾಕ್ಸಿಕ್' ಸಿನಿಮಾದಲ್ಲಿ ನಟ ಯಶ್ ಅಭಿನಯಿಸಿರುವ ಪಾತ್ರದ ಹೆಸರನ್ನು ರಿವೀಲ್ ಮಾಡಲಾಗಿದೆ. ಇದೇ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಸೃಷ್ಟಿಸಿದೆ.
ನಟ ಯಶ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಶುಭಾಶಯ ಕೋರಿದ್ದಾರೆ. ಜೊತೆ ಇಡೀ ಟಾಕ್ಸಿಕ್ ತಂಡಕ್ಕೆ ಶುಭ ಹಾರೈಸಿದ್ದಾರೆ. ಇವರಲ್ಲದೆ ನಟ ರಿಷಬ್ ಶೆಟ್ಟಿ, ತರುಣ್ ಸುಧೀರ್, ಪ್ರಶಾಂತ್ ನೀಲ್ ಸೇರಿದಂತೆ ಸಾಕಷ್ಟು ನಟರು ಯಶ್ ಜನ್ಮದಿನಕ್ಕೆ ಶುಭಾಶಯ ತಿಳಿಸಿದ್ದಾರೆ.
ನಟ ಕಿಚ್ಚ ಸುದೀಪ್
‘ಯಶ್ಗೆ ಶುಭಾಶಯಗಳು. ಅಲೆಗಳ ವಿರುದ್ಧ ಸಾಗಲು ಯಾವಾಗಲೂ ಸಮಯ ಬೇಕಾಗುತ್ತದೆ. ಈ ಹೊಸ ಹೆಜ್ಜೆ ನಿಮ್ಮನ್ನು ಅದೃಷ್ಟದ ಕಡೆಗೆ ಕೊಂಡೊಯ್ಯಲಿ. ನೀವು ನಿಮ್ಮ ಗುರಿಯನ್ನು ಸಾಧಿಸಿ’ ಎಂದು ಬರೆದುಕೊಂಡಿದ್ದಾರೆ.
ರಿಷಬ್ ಶೆಟ್ಟಿ
‘ಯಶ್ ಅವರ ಹುಟ್ಟುಹಬ್ಬದಂದು ಟೀಸರ್ ಬೆಂಕಿಯಂತೆ ಸಿಡಿಯುತ್ತದೆ. ನಮ್ಮ ಪ್ರೀತಿಯ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಇಡೀ ಟಾಕ್ಸಿಕ್ ತಂಡಕ್ಕೆ ಶುಭ ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ತರುಣ್ ಸುಧೀರ್
‘ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮನ್ನು ಹೊಸ ರೀತಿಯಲ್ಲಿ ಪರದೆಯ ಮೇಲೆ ಮತ್ತೆ ನೋಡುವುದೇ ಒಂದು ಅದ್ಭುತ. ಮಾರ್ಚ್ 19ರಂದು ರಾಯ ಜಗತ್ತನ್ನು ಆಳುವುದನ್ನು ನೋಡಲು ಕಾಯಲು ಸಾಧ್ಯವಿಲ್ಲ’ ಎಂದು ಹಾಡಿ ಹೊಗಳಿದ್ದಾರೆ.
2026 ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿದೆ. ಟಾಕ್ಸಿಕ್ ಸಿನಿಮಾವನ್ನು ಗೀತು ಮೋಹನ್‌ದಾಸ್ ಅವರು ನಿರ್ದೇಶಿಸಿದ್ದು, ಕೆವಿಎನ್ ಪ್ರೋಡಕ್ಷನ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಶನ್ ನಿರ್ಮಾಣ ಮಾಡುತ್ತಿದೆ. ಈಗಾಗಲೇ ಚಿತ್ರದಲ್ಲಿರುವ ನಾಯಕಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಅವರುಗಳ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.