ಟಾಕ್ಸಿಕ್
ಬೆಂಗಳೂರು: ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರ 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಯಶ್ ನಟನೆಯ 19ನೇ ಸಿನಿಮಾ ಇದಾಗಿದೆ.
ಟಾಕ್ಸಿಕ್ ಸಿನಿಮಾ ಚಿತ್ರೀಕರಣದ ಹಂತದಲ್ಲಿದ್ದು, ಗೀತು ಮೋಹನ್‌ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಹಿಂದೆ 2025ರ ಏಪ್ರಿಲ್ 10ರಂದು ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಸಿನಿಮಾ ಇದೀಗ 1 ವರ್ಷ ಮುಂದೂಡಲ್ಪಟ್ಟಿದೆ.
ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ.
ಯಶ್ ಜನ್ಮದಿನದಂದು ಚಿತ್ರದ ಗ್ಲಿಮ್ಸ್ ಬಿಡುಗಡೆಯಾಗಿದ್ದು, ರೆಟ್ರೋ ಶೈಲಿಯಲ್ಲಿ ಚಿತ್ರದ ದೃಶ್ಯಗಳಿದ್ದವು.
'ನಿರ್ಮಾಣದ ದೃಷ್ಟಿಯಿಂದ ನೋಡುವುದಾದರೆ ಇಂಗ್ಲಿಷ್ ಹಾಗೂ ಭಾರತೀಯ ಭಾಷೆಯೊಂದರಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಳ್ಳುತ್ತಿರುವ ಮೊದಲ ಬಿಗ್ ಬಜೆಟ್ ಸಿನಿಮಾ ಇದಾಗಿದೆ. ಹಿಂದಿ, ತಮಿಳು, ತೆಲುಗು, ಮಲಯಾಳ ಸೇರಿದಂತೆ ಹಲವು ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ ಡಬ್ ಆಗಿ ಸಿನಿಮಾ ರಿಲೀಸ್ ಆಗಲಿದೆ' ಎಂದಿದೆ ಚಿತ್ರತಂಡ.
ಹಾಲಿವುಡ್‌ನ ಜೆ.ಜೆ.ಪೆರ್‍ರಿ ಚಿತ್ರದ ಸಾಹಸ ನಿರ್ದೇಶಕ. ಡಿಎನ್‌ಇಜಿ ಸ್ಟುಡಿಯೊ ಚಿತ್ರದ ವಿಎಫ್‌ಎಕ್ಸ್ ಮಾಡುತ್ತಿದೆ. 2024ರ ಆಗಸ್ಟ್‌ನಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಿತ್ತು. ಎರಡು ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣ ನಡೆಯುತ್ತಿರುವ ಕಾರಣ, ತಯಾರಿ ಹಾಗೂ ಶೂಟಿಂಗ್ ದಿನಗಳು ಹೆಚ್ಚಾಗುತ್ತಿವೆ ಎಂದಿದೆ ಚಿತ್ರತಂಡ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.