ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಟೀಸರ್ ಇಂದು (ಫೆ.20) ಬಿಡುಗಡೆಯಾಗಿದೆ. ನಟ, ನಿರ್ದೇಶಕ ಯೋಗರಾಜ್ ಭಟ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರದ ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಚಿತ್ರ ಕುರಿತು ಪೋಸ್ಟ್ ಹಂಚಿಕೊಂಡ ಯೋಗರಾಜ್ ಭಟ್, ‘ಟಾಕ್ಸಿಕ್’..ಇದೊಂದು ಅಸಾಧಾರಣ ಹೆಜ್ಜೆ. ನಮ್ಮೂರ ಹೆಮ್ಮೆಯ ನಟನ ಅಭೂತಪರ್ವ, ಸಾಹಸಮಯ, ಜಾಗತಿಕ ಜರ್ನಿ.. ಚಿತ್ರದ ತುಣುಕಿನಲ್ಲೇ ಇದೆ ಎಲ್ಲರೂ ತಿರುಗಿ ನೋಡುವಂತೆ ಮಾಡಿದ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು. ಜೈ ಕನ್ನಡ, ಜೈ ದೇಶ, ಜೈ ಜಗತ್ತು, ಜೈ ಟಾಕ್ಸಿಕ್’ ಎಂದು ಬರೆದು ಶುಭಹಾರೈಸಿದ್ದಾರೆ.
ಟಾಕ್ಸಿಕ್’ ಚಿತ್ರದ ಟೀಸರ್‌ಗೆ ಯೋಗರಾಜ್ ಭಟ್ ಮೆಚ್ಚುಗೆ
ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರವು 2026 ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ನಯನತಾರಾ, ರುಕ್ಷ್ಮಿಣಿ ವಸಂತ್, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಸೇರಿ ಅನೇಕರು ತಾರಬಳಗದಲ್ಲಿದ್ದಾರೆ.
ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡಿದೆ. ಯೋಗರಾಜ್ ಭಟ್ ನಿರ್ದೇಶನದ 'ಡ್ರಾಮಾ' ಚಿತ್ರದಲ್ಲಿ ಯಶ್ ನಾಯಕ ನಟನಾಗಿ ನಟಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.