

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರವು 2026 ಮಾರ್ಚ್ 19ರಂದು ಬಿಡುಗಡೆಯಾಗಲಿದೆ ಎಂದು ಟಿವಿ ನಿರೂಪಕ ಸಿದ್ಧಾರ್ಥ್ ಕಣ್ಣನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಎಂದು ಬರೆದುಕೊಂಡಿದ್ದಾರೆ.
ನಟ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್ ದಾಸ್ ಅವರ ಚಿತ್ರ ಹಂಚಿಕೊಂಡ ಸಿದ್ಧಾರ್ಥ್ ಕಣ್ಣನ್, ‘No Half Measures, Only Fire' ಹೀಗೆ ಬರೆದುಕೊಂಡು ಸಿನಿಮಾಗಳಿಗಾಗಿ ರಾಕಿಂಗ್ ಸ್ಟಾರ್ ಕಠಿಣ ಪರಿಶ್ರಮ ಹಾಕುತ್ತಾರೆ ಎಂದಿದ್ದಾರೆ.
ಯಶ್ ನಟನೆಯ 19ನೇ ಸಿನಿಮಾ ‘ಟಾಕ್ಸಿಕ್’ ಚಿತ್ರವು ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಅದಲ್ಲದೇ ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಭಾರತೀಯ ಹಲವು ಹಾಗೂ ವಿದೇಶಿ ಭಾಷೆಗಳಲ್ಲಿ ಡಬ್ ಆಗಿ ಚಿತ್ರ ಬಿಡುಗಡೆಗೊಳ್ಳಲಿದೆ ಎಂದು ಚಿತ್ರತಂಡ ಹೇಳಿದೆ.