
ಟಾಕ್ಸಿಕ್
ಬೆಂಗಳೂರು: ಚಂದನವನದಲ್ಲಿ ಟಾಕ್ಸಿಕ್ ಅಬ್ಬರ ಜೋರಾಗಿದೆ. ನಾಳೆ (ಜ.8)ರಂದು ಟಾಕ್ಸಿಕ್‌ನಲ್ಲಿ ಯಶ್ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದೆ.
ಯಶ್ ಅವರ ಜನ್ಮದಿನದ ಹಿನ್ನೆಲೆ ನಾಳೆ ಬೆಳಿಗ್ಗೆ 10.10ಕ್ಕೆ ಪೋಸ್ಟರ್ ಬಿಡುಗಡೆಯಾಗಲಿದೆ. ಇದು ಟೀಸರ್ ಅಥವಾ ಟ್ರೇಲರ್ ಅಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.
ಈಗಾಗಲೇ ಮೆಲಿಸಾ ಆಗಿ ರುಕ್ಮಿಣಿ ವಸಂತ್, ಗಂಗಾ ಆಗಿ ನಯನತಾರಾ, ಎಲಿಜಬೇತ್ ಆಗಿ ಹುಮಾಖುರೇಶಿ, ನಾದಿಯಾ ಆಗಿ ಕಿಯಾರಾ ಅಡ್ವಾಣಿ ಅವರನ್ನು ಪೋಸ್ಟರ್ ಮೂಲಕ ಪರಿಚಯಿಸಲಾಗಿದೆ.
ಈಗ ನಾಯಕ ನಟ ಯಶ್ ಅವರ ಪಾತ್ರವನ್ನು ಬಹಿರಂಗಪಡಿಸಲು ಚಿತ್ರತಂಡ ಸಜ್ಜಾಗಿದೆ.
ಟಾಕ್ಸಿಕ್‌ನಲ್ಲಿ ಗೋವಾದಲ್ಲಿನ ಡ್ರಗ್ಸ್ ಮಾಫಿಯಾದ ಕಥೆಯನ್ನು ಚಿತ್ರ ಹೊಂದಿದೆ. ಚಿತ್ರಕ್ಕೆ ಗೀತು ಮೋಹನ್ದಾಸ್ ಆ್ಯಕ್ಷನ್ ಕಟ್ ಹೇಳಿದ್ದು, ಕೆವಿಎನ್ ಸಂಸ್ಥೆ ಬಂಡವಾಳ ಹೂಡಿದೆ. ಯಶ್ ಅವರು ತಮ್ಮ ಮಾನ್ಸ್ಟರ್ ಮೈಂಡ್ ನಿರ್ಮಾಣ ಸಂಸ್ಥೆಯ ಮೂಲಕ ಸಹ ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ, ರಾಜೀವ್ ರವಿ ಛಾಯಾಚಿತ್ರಗ್ರಹಣವಿದೆ.
‘ಟಾಕ್ಸಿಕ್’ ಚಿತ್ರ ಮಾರ್ಚ್ 19ಕ್ಕೆ ತೆರೆಗೆ ಬರಲು ಸಜ್ಜಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.