ADVERTISEMENT

‘ಟಾಕ್ಸಿಕ್’ ಸಿನಿಮಾದ ಮೊದಲ ಹಾಡಿನಲ್ಲಿ ಯಶ್ ಜೊತೆ ಬಾಲಿವುಡ್ ಬ್ಯೂಟಿ ರೊಮ್ಯಾನ್ಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2026, 11:44 IST
Last Updated 28 ಫೆಬ್ರುವರಿ 2026, 11:44 IST
<div class="paragraphs"><p>ಟಾಕ್ಸಿಕ್ ಸಿನಿಮಾ ಪೋಸ್ಟರ್</p></div>

ಟಾಕ್ಸಿಕ್ ಸಿನಿಮಾ ಪೋಸ್ಟರ್

   

ಚಿತ್ರ: ಇನ್‌ಸ್ಟಾಗ್ರಾಂ

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಚಿತ್ರತಂಡ ಒಂದೊಂದೆ ಅಪ್‌ಡೇಟ್‌ಗಳನ್ನು ನೀಡುತ್ತಿದೆ. ಈಗಾಗಲೇ ಟಾಕ್ಸಿಕ್ ಚಿತ್ರದ ಎರಡು ಟೀಸರ್​ಗಳು ಬಿಡುಗಡೆಯಾಗಿ ಸಖತ್ ಸದ್ದು ಮಾಡಿವೆ. ಈಗ ಟಾಕ್ಸಿಕ್‌ನ ಮೊದಲ ಹಾಡು ಬಿಡುಗಡೆಗೆ ಸಮಯ ನಿಗದಿಯಾಗಿದೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರು ಪೋಸ್ಟರ್ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಮೊದಲ ಹಾಡು ಮಾರ್ಚ್ 2ರಂದು ರಿಲೀಸ್ ಆಗಲಿದೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಪೋಸ್ಟರ್‌ನಲ್ಲಿ ನಟ ಯಶ್ ಜೊತೆಗೆ ಬಾಲಿವುಡ್‌ ನಟಿ ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿದ್ದಾರೆ. ಯಶ್‌ನನ್ನು ತಬ್ಬಿಕೊಂಡ ಲುಕ್‌ನಲ್ಲಿ ನಟಿ ಕಿಯಾರಾ ಅಡ್ವಾಣಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡಿದ್ದು, ಮಾರ್ಚ್ 19ರಂದು ವಿಶ್ವದಾದ್ಯಂತ ‘ಟಾಕ್ಸಿಕ್’ ಬಿಡುಗಡೆಯಾಗಲಿದೆ. ಇದರ ಜೊತೆಗೆ ‘ಧುರಂಧರ್ 2’ ಕೂಡ ಬಿಡುಗಡೆಗೆ ಸಜ್ಜಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.