
ಚಿತ್ರ ಕೃಪೆ: KvnProductions
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್ ’ ಚಿತ್ರ ಬಿಡುಗಡೆ ದಿನಾಂಕದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಬಿದ್ದಿದೆ. ಸಿನಿಮಾ ಬಿಡುಗಡೆ ದಿನಾಂಕ ಕುರಿತು ಸಿನಿ ವಿಮರ್ಶಕ ತರಣ್ ಆದರ್ಶ್ ಹಾಗೂ ಕೆವಿಎನ್ ಪ್ರೊಡಕ್ಷನ್ ಮಾಹಿತಿ ನೀಡಿದೆ.
‘ಟಾಕ್ಸಿಕ್’ ಬಿಡುಗಡೆ ಕುರಿತು ಮಾಹಿತಿ ನೀಡಿರುವ ವಿಮರ್ಶಕ ತರಣ್ ಆದರ್ಶ್, ‘ಈ ಚಿತ್ರದ ಪೋಸ್ಟ್-ಪ್ರೊಡಕ್ಷನ್ ಮತ್ತು ವಿಎಫ್‌ಎಕ್ಸ್ ಕೆಲಸಗಳು ಏಪ್ರಿಲ್‌ನಲ್ಲಿ ಆರಂಭ ಆಗಲಿದೆ. ಚಿತ್ರೀಕರಣದ ಅಂತಿಮ ಹಂತವು ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಸಿನಿಮಾದ ಪ್ರಚಾರಗಳು ಜನವರಿ 2026ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ’ ಎಂದು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕೆವಿಎನ್ ಪ್ರೊಡಕ್ಷನ್ ಕೂಡ ‘ಟಾಕ್ಸಿಕ್‘ ಚಿತ್ರದ ಪೋಸ್ಟರ್ ಹಂಚಿಕೊಂಡು ‘140 ದಿನಗಳು ಬಾಕಿ ಇದೆ 2026ರ ಮಾ. 19ರಂದು ಚಿತ್ರ ರಿಲೀಸ್ ಆಗುತ್ತದೆ‘ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದೆ.
'ಟಾಕ್ಸಿಕ್' ಚಿತ್ರವನ್ನು ಗೀತು ಮೋಹನ್‌ದಾಸ್ ನಿರ್ದೇಶನ ಮಾಡಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. ಈ ಸಿನಿಮಾ ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಳ್ಳುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.