ADVERTISEMENT

ಅಂತಿಮ ಹಂತದಲ್ಲಿ ‘ಟಾಕ್ಸಿಕ್’

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 23:51 IST
Last Updated 19 ಸೆಪ್ಟೆಂಬರ್ 2025, 23:51 IST
ಯಶ್‌
ಯಶ್‌   

ಯಶ್‌ ಅಭಿನಯದ ‘ಟಾಕ್ಸಿಕ್‌’ ಚಿತ್ರದ ಮುಂಬೈ ಭಾಗದ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ. ಅಂತಿಮ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಚಿತ್ರತಂಡ ಹೇಳಿದೆ.

ಗೀತು ಮೋಹನ್‌ದಾಸ್‌ ನಿರ್ದೇಶನದ ಚಿತ್ರ ಕನ್ನಡ ಹಾಗೂ ಇಂಗ್ಲಿಷ್‌ ಭಾಷೆಗಳಲ್ಲಿ ಸಿದ್ಧಗೊಳ್ಳುತ್ತಿದೆ. ‘ಮುಂಬೈ ನಗರದ ಅನೇಕ ಸ್ಥಳಗಳಲ್ಲಿ 45 ದಿನಗಳ ಕಾಲ ನಡೆದ ಚಿತ್ರೀಕರಣದಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಿದ್ದೇವೆ. ಇದರೊಂದಿಗೆ ಚಿತ್ರದ ಬಹುಪಾಲು ಚಿತ್ರೀಕರಣ ಮುಗಿದಂತಾಗಿದೆ. ಉಳಿದ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಹಾಲಿವುಡ್ ಸಾಹಸ ನಿರ್ದೇಶಕ ಜೆಜೆ ಪೆರ್ರಿ ಸಾಹಸ ದೃಶ್ಯಗಳನ್ನು ನಿರ್ದೇಶಿಸಿದ್ದಾರೆ. ಇವರು ‘ಫಾಸ್ಟ್‌ ಆ್ಯಂಡ್‌ ಫ್ಯೂರಿಯಸ್‌’, ‘ವಾರಿಯರ್‌’ ಮುಂತಾದ ಸಿನಿಮಾಗಳಿಗೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ’ ಎಂದು ಚಿತ್ರತಂಡ ತಿಳಿಸಿದೆ.

ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ನಲ್ಲಿ ವೆಂಕಟ್ ಕೆ ನಾರಾಯಣ ಬಂಡವಾಳ ಹೂಡಿದ್ದಾರೆ. ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್‌ ಕೂಡ ಚಿತ್ರ ನಿರ್ಮಾಣದಲ್ಲಿ ಪಾಲು ಹೊಂದಿದೆ. ‘ಗೋವಾದ ಡ್ರಗ್ಸ್‌ ಮಾಫಿಯಾ ಕಥೆ ಹೊಂದಿರುವ ಚಿತ್ರವಿದು’ ಎಂದಿದೆ ಚಿತ್ರತಂಡ ಮೂಲಗಳು. ಹಿಂದಿ, ತಮಿಳು, ತೆಲುಗು, ಮಲಯಾಳ ಸೇರಿದಂತೆ ಹಲವು ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ ಡಬ್‌ ಆಗಿ ಬಿಡುಗಡೆಗೊಳ್ಳಲಿದೆ. ‌

ADVERTISEMENT

ಬೃಹತ್‌ ಬಂಡವಾಳದಲ್ಲಿ ನಿರ್ಮಾಣಗೊಳ್ಳುತ್ತಿರುವ ಚಿತ್ರ 2026ರ ಮಾರ್ಚ್‌ 19ರಂದು ತೆರೆಕಾಣಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.