ADVERTISEMENT

Toxic ಟೀಸರ್ ಬಿಡುಗಡೆಗೆ ಮುಹೂರ್ತ ನಿಗದಿ: ನಿರ್ದೇಶಕಿಯಿಂದ ಬಿಗ್‌ ಅಪ್‌ಡೇಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಫೆಬ್ರುವರಿ 2026, 7:28 IST
Last Updated 19 ಫೆಬ್ರುವರಿ 2026, 7:28 IST
<div class="paragraphs"><p>ನಟ ಯಶ್</p></div>

ನಟ ಯಶ್

   

ಚಿತ್ರ: ಇನ್‌ಸ್ಟಾಗ್ರಾಂ

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ಚಿತ್ರತಂಡ ಅಪ್‌ಡೇಟ್‌ ಒಂದನ್ನು ಕೊಟ್ಟಿದೆ. 2026 ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ನಾಳೆ (ಫೆ.20) ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿದೆ.

ADVERTISEMENT

ಈ ಬಗ್ಗೆ ನಿರ್ದೇಶಕಿ ಗೀತು ಮೋಹನ್ ದಾಸ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ಬೆಳಿಗ್ಗೆ 9:35ಕ್ಕೆ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗೆ (ಜ.8) ಟಾಕ್ಸಿಕ್ ಸಿನಿಮಾದಲ್ಲಿ ಯಶ್‌ ಪಾತ್ರದ ಹೆಸರನ್ನು ವಿಡಿಯೊ ಮೂಲಕ ಬಿಡುಗಡೆ ಮಾಡಿದ್ದರು. ಆ ವಿಡಿಯೊ ಇದೀಗ 10 ಕೋಟಿ ವೀಕ್ಷಣೆ ಪಡೆದು ಮುನ್ನುಗ್ಗುತ್ತಿದೆ.

ಕೇವಲ 2.51 ನಿಮಿಷಗಳ ವಿಡಿಯೊ ವೀಕ್ಷಿಸಿದ ಅಭಿಮಾನಿಗಳು ದಂಗಾಗಿದ್ದರು. ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದರು. ಆ ವಿಡಿಯೊ ಬಿಡುಗಡೆಯಾದ ಬಳಿಕ 'ಆಕ್ಷೇಪಾರ್ಹ ದೃಶ್ಯ' ಹೊಂದಿದೆ ಎಂದು ಸಾಮಾಜಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಗಾಗಿತ್ತು. ಅದರ ಬೆನ್ನಲ್ಲೆ ನಾಳೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಲಿದ್ದು, ಅಭಿಮಾನಿಗಳು, ಸಿನಿ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ.

ಇನ್ನು, ಗೀತು ಮೋಹನ್‌ದಾಸ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಟಾಕ್ಸಿಕ್‌ ಸಿನಿಮಾದಲ್ಲಿ ಸ್ಟಾರ್‌ ನಟಿಯರ ದೊಡ್ಡ ಸಮೂಹವೇ ಇದೆ. ಸ್ಟಾರ್ ನಟಿಯರ ಪಾತ್ರದ ಹೊಸ ಫೋಟೊಗಳನ್ನು ನಟ ಯಶ್‌ ಸಾಮಾಜಿಕ ಮಾಧ್ಯಮದಲ್ಲಿ ರಿವೀಲ್‌ ಮಾಡಿದ್ದರು. ನಯನತಾರಾ, ರುಕ್ಮಿಣಿ ವಸಂತ್‌, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಹಾಗೂ ತಾರಾ ಅವರ ಪಾತ್ರಗಳನ್ನು ಪರಿಚಯಿಸಲಾಗಿದೆ.

ಈ ಸಿನಿಮಾ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡಿದೆ. ವಿಶೇಷ ಏನೆಂದರೆ ಈ ಸಿನಿಮಾದ ಕಥೆ, ಚಿತ್ರಕಥೆ, ಡೈಲಾಗ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.