
ವೀರೇನ್ ಕೇಶವ್ ಮತ್ತು ‘ಬಿಗ್‌ಬಾಸ್’ ಖ್ಯಾತಿಯ ಜಾಹ್ನವಿ ಜೋಡಿಯಾಗಿ ನಟಿಸಿರುವ ‘ಯುವ ಸರ್ಕಾರ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಶಿವರಾಜ್‌ಕುಮಾರ್, ತಮ್ಮ ಚಿಕ್ಕಮ್ಮನ ಮಗ ಸಂತೋಷ್ ಕುಮಾರ್ ನಿರ್ದೇಶಿಸಿರುವ ಚಿತ್ರಕ್ಕೆ ಸಾಥ್ ನೀಡಿದ್ದಾರೆ.
‘ತಾಯಿ ಮತ್ತು ಮಗನ ನಡುವೆ ನಡೆಯುವ ಭಾವನಾತ್ಮಕ ಕಥೆಯಿದು. ತಾಯಿ, ತನ್ನ ಮಗನನ್ನು ಗಾಂಧಿಯ ಥರ ಬೆಳೆಸುತ್ತಾಳೆ. ಆದರೆ ಆ ಮಗ ಯಾಕೆ ರಾಬಿನ್ ಹುಡ್ ರೀತಿ ಆಗುತ್ತಾನೆ ಎಂಬುದೇ ಈ ಚಿತ್ರದ ಕಥೆ. ಹಲವು ಕಥೆಗಳಲ್ಲಿ ರಾಬಿನ್ ಹುಡ್‌ನನ್ನು ಓರ್ವ ದರೋಡೆಕೋರನ ಥರ ತೋರಿಸಿದ್ದಾರೆ. ಆದರೆ ನಾವಿಲ್ಲಿ ಜನಸ್ನೇಹಿಯಾಗಿ ತೋರಿಸಿದ್ದೇವೆ. ಕನ್ನಡ, ತಮಿಳು, ಹಿಂದಿ ಭಾಷೆಗಳಲ್ಲಿ ಚಿತ್ರೀಕರಣಗೊಂಡಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿವೆ’ ಎಂದರು ನಿರ್ದೇಶಕ.
ಶೃತಿ ದೇಶಪಾಂಡೆ, ಅಲ್ಫಿಯಾ, ಧರ್ಮ ಕೀರ್ತಿರಾಜ್, ಕೀರ್ತಿರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿರ್ದೇಶಕರೇ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳು, ನಾಲ್ಕು ಸಾಹಸ ದೃಶ್ಯಗಳಿವೆ. ಚೆನ್ನೈ, ಚಿಕ್ಕಮಗಳೂರು, ಮೇಲುಕೋಟೆಯ ಸುತ್ತಮುತ್ತ ಚಿತ್ರೀಕರಣಗೊಂಡಿದೆ. ಜೂನ್‌ನಲ್ಲಿ ಸಿನಿಮಾ ಬಿಡುಗಡೆಗೆ ತಂಡ ಯೋಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.