
‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ನಟ ಝೈದ್ ಖಾನ್ ನಟನೆಯ ಹೊಸ ಸಿನಿಮಾ ‘ಕಲ್ಟ್’ ರಿಲೀಸ್ ದಿನಾಂಕ ಘೋಷಣೆಯಾಗಿದೆ.
‘ಉಪಾಧ್ಯಕ್ಷ’ ಸಿನಿಮಾ ಖ್ಯಾತಿಯ ಅನಿಲ್ ಕುಮಾರ್ ನಿರ್ದೇಶನದ ಈ ಸಿನಿಮಾ 2026ರ ಜ.23ರಂದು ತೆರೆಕಾಣಲಿದೆ. ಇತ್ತೀಚೆಗೆ ಕಿತ್ತೂರು ಉತ್ಸವದಲ್ಲಿ ಚಿತ್ರದ ಎರಡನೇ ಹಾಡು ‘ಬ್ಲಡಿ ಲವ್’ ಬಿಡುಗಡೆಯಾಯಿತು. ಚಿತ್ರದಲ್ಲಿ ನಾಯಕಿಯರಾಗಿ ರಚಿತಾ ರಾಮ್ ಮತ್ತು ಮಲೈಕಾ ಟಿ.ವಸುಪಾಲ್ ಅಭಿನಯಿಸಿದ್ದಾರೆ. ‘ಬ್ಲಡಿ ಲವ್’ ಹಾಡಿಗೆ ನಿರ್ದೇಶಕ ಅನಿಲ್ ಕುಮಾರ್ ಅವರೇ ಸಾಹಿತ್ಯ ಬರೆದಿದ್ದು, ಚಂದನ್ ಶೆಟ್ಟಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ಈಗಾಗಲೇ ಚಿತ್ರದ ‘ಅಯ್ಯೋ ಶಿವನೇ’ ಎಂಬ ಹಾಡು ಬಿಡುಗಡೆಯಾಗಿದ್ದು, ಇದರಲ್ಲಿ ಝೈದ್ ಹಾಗೂ ಮಲೈಕಾ ಹೆಜ್ಜೆ ಹಾಕಿದ್ದಾರೆ. ಪ್ರಿತಿ, ಆ್ಯಕ್ಷನ್, ಭಾವನಾತ್ಮಕ ಅಂಶಗಳುಳ್ಳ ಕಥೆಯೊಂದಿಗೆ ಅನಿಲ್ ಈ ಬಾರಿ ಬರಲಿದ್ದು, ಲೋಕಿ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಅರ್ಪಿಸುತ್ತಿದೆ. ಜೆ.ಎಸ್ ವಾಲಿ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.