ಜಯತೀರ್ಥ ನಿರ್ದೇಶನದ ‘ಬನಾರಸ್’ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟ ನಟ ಝೈದ್ ಖಾನ್ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇತ್ತೀಚೆಗಷ್ಟೇ ತೆರೆಕಂಡಿದ್ದ ‘ಉಪಾಧ್ಯಕ್ಷ’ ಸಿನಿಮಾದ ರುವಾರಿ ಅನಿಲ್ ಕುಮಾರ್ ಝೈದ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಕಿಚ್ಚ ಸುದೀಪ್ ಅಭಿನಯದ ‘ಕೆಂಪೇಗೌಡ’ ಚಿತ್ರಕ್ಕೆ ಸಂಭಾಷಣೆ ಬರೆಯುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಅನಿಲ್ ಕುಮಾರ್, ಸುಮಂತ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ‘ದಿಲ್‌ವಾಲ’ ಚಿತ್ರದ ಮೂಲಕ ನಿರ್ದೇಶಕರಾದರು. ಶರಣ್ ನಟನೆಯ ‘ರ‍್ಯಾಂಬೊ 2’ ಚಿತ್ರದ ಬಳಿಕ ‘ಉಪಾಧ್ಯಕ್ಷ’ನ ಕೈಹಿಡಿದಿದ್ದರು. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡಿತು. ಇದರ ಬೆನ್ನಲ್ಲೇ ಹೊಸ ಪ್ರಾಜೆಕ್ಟ್ ಘೋಷಿಸಿದ್ದಾರೆ ಅನಿಲ್. ‘ಬನಾರಸ್’ ಚಿತ್ರದ ನಂತರ ಸಾಕಷ್ಟು ಕಥೆ ಕೇಳಿರುವ ಝೈದ್ ಖಾನ್ ಈ ಚಿತ್ರದ ಕಥೆಯನ್ನು ಒಪ್ಪಿಕೊಂಡಿದ್ದಾರೆ. ಕ್ಲಾಸ್ ಆ್ಯಂಡ್ ಮಾಸ್ ಕಥೆಯನ್ನು ಈ ಚಿತ್ರವು ಹೊಂದಿದ್ದು, ಹೆಸರಾಂತ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ ಎಂದಿದೆ ತಂಡ. ತಾಂತ್ರಿಕವರ್ಗ ಹಾಗೂ ತಾರಾಬಳಗದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ಹೇಳಿದ್ದಾರೆ ಅನಿಲ್ ಕುಮಾರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.