

ಸ್ಯಾಂಡಲ್‌ವುಡ್‌ನ ಕ್ರೈಮ್–ಥ್ರಿಲ್ಲರ್ ಸಿನಿಮಾ ‘ಬಂದೂಕ್’, ಜ.16ರಂದು ‘ಲಯನ್ ಗೇಟ್ ಪ್ಲೇ’ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.
ಬಾಲ್ಯದಲ್ಲಿ ನಡೆದ ಘಟನೆಯೊಂದರಿಂದ ಆಘಾತಕ್ಕೆ ಒಳಗಾಗಿದ್ದ ಯುವಕನೊಬ್ಬ ಕೊಲೆಯ ಮೂಲಕ ಸೇಡು ತೀರಿಸಿಕೊಳ್ಳಲು ಹೊರಡುತ್ತಾನೆ. ನಂತರ ಏನಾಗುತ್ತದೆ ಎನ್ನುವುದೇ ಚಿತ್ರದ ಕತೆಯಾಗಿದೆ.
‘ಬಂದೂಕ್’ ಸಿನಿಮಾವು 2025ರ ಜುಲೈ 25ರಂದು ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿತ್ತು. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡುವಲ್ಲಿ ಸಿನಿಮಾವು ವಿಫಲವಾಗಿತ್ತು.
ಮಹೇಶ್ ರವಿಕುಮಾರ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದೆ. ಪಾರ್ಥ, ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಶ್ವೇತಾ ಪ್ರಸಾದ್, ಶಂಕರ್ ಅಶ್ವಥ್, ಹರೀಶ್ ರೈ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.