ADVERTISEMENT

ಅಮೆಜಾನ್‌ ಪ್ರೈಮ್‌ನಲ್ಲಿ ದೀಕ್ಷಿತ್‌ ಶೆಟ್ಟಿ ಅವರ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 16:22 IST
Last Updated 20 ಜನವರಿ 2026, 16:22 IST
<div class="paragraphs"><p>ದೀಕ್ಷಿತ್‌ ಶೆಟ್ಟಿ</p></div>

ದೀಕ್ಷಿತ್‌ ಶೆಟ್ಟಿ

   

ದೀಕ್ಷಿತ್‌ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಜೋಡಿಯಾಗಿ ನಟಿಸಿರುವ ‘‌ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮಿ’ ಚಿತ್ರ ಈಗ ಅಮೆಜಾನ್‌ ಪ್ರೈಮ್‌ನಲ್ಲಿ ಲಭ್ಯವಿದೆ. ‘ಚಾರ್ಲಿ’ ಸೇರಿದಂತೆ ಕನ್ನಡದ ಪ್ರಮುಖ ಚಿತ್ರಗಳಿಗೆ ವಿಎಫ್‌ಎಕ್ಸ್‌ ಮಾಡಿರುವ ಅಭಿಷೇಕ್‌ ಎಂ. ಚೊಚ್ಚಲ ನಿರ್ದೇಶನದ ಚಿತ್ರವಿದು. ಎಚ್.ಕೆ ಪ್ರಕಾಶ್ ಬಂಡವಾಳ ಹೂಡಿದ್ದಾರೆ.

‘ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೂ ಚಿತ್ರಮಂದಿರಗಳಲ್ಲಿ ನೋಡಲು ಪ್ರೇಕ್ಷಕರು ಹೆಚ್ಚು ಒಲುವು ತೋರಲಿಲ್ಲ. ಈಗ ಪ್ರೈಮ್‌ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ಟ್ರೆಂಡಿಂಗ್‌ನಲ್ಲಿದೆ’ ಎಂದಿದೆ ಚಿತ್ರತಂಡ.

ADVERTISEMENT

ಅಪ್ರಬುದ್ಧ, ಹುಡುಗುಬುದ್ಧಿಯ ಯುವಕರ ತಂಡವೊಂದು ಬ್ಯಾಂಕ್‌ ದರೋಡೆ ಮಾಡುವ ಕಥೆಯನ್ನು ಚಿತ್ರ ಹೊಂದಿದೆ. ಜ್ಯೂಡಾ ಸ್ಯಾಂಡಿ ಸಂಗೀತ, ಅಭಿಷೇಕ್ ಜಿ ಕಾಸರಗೋಡು ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಅಚ್ಯುತ್‌ಕುಮಾರ್, ಸಾಧು ಕೋಕಿಲ, ಅಶ್ವಿನ್ ರಾವ್ ಪಲ್ಲಕ್ಕಿ ಮೊದಲಾದವರು ಚಿತ್ರದಲ್ಲಿದ್ದಾರೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.