ADVERTISEMENT

ಬೆತ್ತಲೆ ಫೋಟೊಶೂಟ್ ಪ್ರಕರಣ: ರಣವೀರ್ ಸಿಂಗ್ ಹೇಳಿಕೆ ದಾಖಲು

ಬಾಲಿವುಡ್ ನಟ ರಣವೀರ್ ಸಿಂಗ್ ಅವರ ಫೋಟೊಶೂಟ್ ಪ್ರಕರಣ

ಪಿಟಿಐ
Published 30 ಆಗಸ್ಟ್ 2022, 1:14 IST
Last Updated 30 ಆಗಸ್ಟ್ 2022, 1:14 IST
ಬಾಲಿವುಡ್ ನಟ ರಣವೀರ್ ಸಿಂಗ್
ಬಾಲಿವುಡ್ ನಟ ರಣವೀರ್ ಸಿಂಗ್    

ಮುಂಬೈ: ಬೆತ್ತಲೆ ಫೋಟೊಶೂಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರ ಹೇಳಿಕೆಯನ್ನು ಮುಂಬೈ ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಸರ್ಕಾರೇತರ ಸಂಸ್ಥೆಯೊಂದು ಚೆಂಬೂರು ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ಬೆತ್ತಲೆ ಫೋಟೊಶೂಟ್ ವಿರುದ್ಧ ದೂರು ದಾಖಲಿಸಿತ್ತು.

ಸೋಮವಾರ ಬೆಳಗ್ಗೆ ರಣವೀರ್ ಸಿಂಗ್ ಅವರು ತನಿಖಾಧಿಕಾರಿ ಮುಂದೆ ಹಾಜರಾಗಿ, ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಮುಂದೆ ಅಗತ್ಯವಿದ್ದಲ್ಲಿ ನಟ ಸಿಂಗ್‌ರನ್ನು ಮತ್ತೆ ಪೊಲೀಸ್ ಠಾಣೆಗೆ ಕರೆಯಲಾಗುತ್ತದೆ ಎನ್ನಲಾಗಿದೆ.

ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.