ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್‌ ಇನ್‌ಸ್ಟಾಗ್ರಾಮ್‌ ಪೋಸ್ಟ್

ಆರೋಪ ಪಟ್ಟಿಯಲ್ಲಿ ಹೆಸರು ಸೇರಿಸಲು ಇ.ಡಿ ನಿರ್ಧರಿಸಿರುವ ಬೆನ್ನಲ್ಲೇ ಪೋಸ್ಟ್ ಶೇರ್ ಮಾಡಿದ ನಟಿ ಜಾಕ್ವೆಲಿನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಆಗಸ್ಟ್ 2022, 14:09 IST
Last Updated 17 ಆಗಸ್ಟ್ 2022, 14:09 IST
ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡೀಸ್‌
ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡೀಸ್‌    

ಬೆಂಗಳೂರು:ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹೊಸದಾಗಿ ಆರೋಪ ಪಟ್ಟಿ ಸಲ್ಲಿಸಲು ಮುಂದಾಗಿರುವ ಜಾರಿ ನಿರ್ದೇಶನಾಲಯ(ಇ.ಡಿ) ಬಾಲಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡೀಸ್‌ ಹೆಸರು ಸೇರ್ಪಡೆ ಮಾಡಲು ತೀರ್ಮಾನಿಸಿದೆ. ಅದರ ಬೆನ್ನಲ್ಲೇ ನಟಿ ಜಾಕ್ವೆಲಿನ್‌, ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದಾರೆ.

ಡಿಯರ್ ಮಿ ಎಂದು ಸ್ಟೇಟಸ್ ಪೋಸ್ಟ್ ಆರಂಭಿಸಿರುವ ನಟಿ, ನಾನು ಬಲಿಷ್ಠವಾಗಿದ್ದೇನೆ, ಇದನ್ನು ನಾನು ಒಪ್ಪಿಕೊಳ್ಳುತ್ತೇನೆ, ಎಲ್ಲವೂ ಸರಿಯಾಗಲಿದೆ. ನಾನು ನನ್ನ ಗುರಿಯನ್ನು ಸಾಧಿಸುತ್ತೇನೆ, ಕನಸನ್ನು ನನಸಾಗಿಸುತ್ತೇನೆ, ನನಗದು ಸಾಧ್ಯವಿದೆ ಎಂದು ಹೇಳಿಕೊಂಡಿದ್ದಾರೆ.

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ ₹200 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ಗೆ ₹10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.

ADVERTISEMENT
ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸ್ಟೋರಿ ಪೋಸ್ಟ್

ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್‌ಎ) ಕಾಯ್ದೆಯಡಿ ಇ.ಡಿ ಅಧಿಕಾರಿಗಳು ಏಪ್ರಿಲ್‌ನಲ್ಲಿ ಜಾಕ್ವೆಲಿನ್‌ ಅವರಿಂದ ₹7.7 ಕೋಟಿ ಹಣ ಜಪ್ತಿ ಮಾಡಿದ್ದರು. ಬಳಿಕ ₹15 ಲಕ್ಷವನ್ನೂ ವಶಕ್ಕೆ ಪಡೆದಿದ್ದರು. ಇದು ಅಕ್ರಮ ಆದಾಯ ಎಂದೂ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.