

ಸ್ಯಾಂಡಲ್‌ವುಡ್‌ನ ‘ನಾನು ಮತ್ತು ಗುಂಡ 2’ ಸಿನಿಮಾವು ಜೀ 5 ಒಟಿಟಿಯಲ್ಲಿ ಬಿಡುಗಡೆಯಾಗಿದೆ.
2020ರಲ್ಲಿ ಬಿಡುಗಡೆಯಾಗಿದ್ದ ಶಿವರಾಜ್ ಕೆ.ಆರ್ ಪೇಟೆ ಅವರ ಅಭಿನಯದ ‘ನಾನು ಮತ್ತು ಗುಂಡ’ ಸಿನಿಮಾದ ಸಿಕ್ವೆಲ್ ಆಗಿರುವ ‘ನಾನು ಮತ್ತು ಗುಂಡ 2’ ಚಿತ್ರವು 2025ರ ಸೆಪ್ಟೆಂಬರ್‌ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿತ್ತು.
ಸಿಂಬ ಎನ್ನುವ ನಾಯಿ ಹಾಗೂ ಗುಂಡನ ಮಧ್ಯದ ಬಾಂಧವ್ಯದ ಕುರಿತು ಚಿತ್ರವಿದೆ.
ರಘು ಹಾಸನ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಾಕೇಶ್ ಅಡಿಗ, ರಚನಾ ಇಂದರ್, ಮಂಜು ಪಾವಗಡ, ಗೋವಿಂದೇ ಗೌಡ ಅವರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.
ಸ್ಯಾಂಡಲ್‌ವುಡ್‌ನಲ್ಲಿ ನಿರೀಕ್ಷೆ ಮೂಡಿಸಿದ್ದ ‘ನಾನು ಮತ್ತು ಗುಂಡ 2’ ಸಿನಿಮಾವು ಬಾಕ್ಸ್‌ಆಫೀಸ್‌ನಲ್ಲಿ ನಿರೀಕ್ಷಿತ ಮೊತ್ತಗಳಿಸುವಲ್ಲಿ ವಿಫಲವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.