ADVERTISEMENT

ಕಾರು ಅಪಘಾತ: ‘ಕಚ್ಚಾ ಬಾದಾಮ್‌’ ಗಾಯಕ ಭುಬನ್ ಭಡ್ಯಾಕರ್‌ ಆಸ್ಪತ್ರೆಗೆ ದಾಖಲು 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮಾರ್ಚ್ 2022, 7:13 IST
Last Updated 2 ಮಾರ್ಚ್ 2022, 7:13 IST
ಭುಬನ್ ಭಡ್ಯಾಕರ್
ಭುಬನ್ ಭಡ್ಯಾಕರ್   

ಕೋಲ್ಕತ್ತ: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ‘ಕಚ್ಚಾ ಬಾದಾಮ್‌’ ಹಾಡಿನ ಗಾಯಕ ಭುಬನ್ ಭಡ್ಯಾಕರ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಪಶ್ಚಿಮ ಬಂಗಾಳದ ಬಿರ್ಭುಮ್‌ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಭುಬನ್ ಭಡ್ಯಾಕರ್, ಇತ್ತೀಚೆಗೆ ಖರೀದಿಸಿದ ಕಾರನ್ನು ಓಡಿಸಲು ಕಲಿಯುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮುಖ ಮತ್ತು ಎದೆ ಭಾಗಕ್ಕೆ ಗಾಯಗಳಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತರೊಬ್ಬರು ಸುದ್ದಿಸಂಸ್ಥೆ ‘ಪಿಟಿಐ’ಗೆ ತಿಳಿಸಿದ್ದಾರೆ.

ಬೀದಿ ಬದಿಯಲ್ಲಿ ಕಡಲೆಕಾಯಿ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ಭುಬನ್ ಭಡ್ಯಾಕರ್ ಅವರ ‘ಕಚ್ಚಾ ಬಾದಾಮ್‌’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹೊಸ ಟ್ರೆಂಡ್ ಸೃಷ್ಟಿಸಿದೆ.

ಕಡಲೇ ಕಾಯಿ ಮಾರಾಟ ಮಾಡುವ ಸಲುವಾಗಿ ಅವರೇ ಈ ಹಾಡು ಬರೆದು ಹಾಡಿದ್ದರು. ಬಂಗಾಳಿಯಲ್ಲಿ ‘ಕಚ್ಚಾ ಬಾದಾಮ್‌’ ಎಂದರೆ ಹಸಿ ಕಡಲೆಕಾಯಿ. ಈ ಹಾಡಿನ ಮೂಲಕ ಭಡ್ಯಾಕರ್ ಹೆಚ್ಚು ಖ್ಯಾತಿ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.