ADVERTISEMENT

Jawan X Review: 'ಎಕ್ಸ್‌' ವಿಮರ್ಶೆಯಲ್ಲಿ ಗೆದ್ದ ಜವಾನ್; ಶಾರೂಕ್‌ಗೆ ಬಹುಪರಾಕ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಸೆಪ್ಟೆಂಬರ್ 2023, 6:40 IST
Last Updated 7 ಸೆಪ್ಟೆಂಬರ್ 2023, 6:40 IST
<div class="paragraphs"><p>ಜವಾನ್</p></div>

ಜವಾನ್

   

ಬೆಂಗಳೂರು: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ 'ಜವಾನ್' ಚಿತ್ರ ಇಂದು ಬಿಡುಗಡೆಗೆಯಾಗಿದ್ದು ಸಾಮಾಜಿಕ ಜಾಲತಾಣ ಎಕ್ಸ್‌ ವಿಮರ್ಶೆಯಲ್ಲಿ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಭಾರತ ಸೇರಿದಂತೆ ವಿದೇಶಗಳಲ್ಲಿ ಜವಾನ್‌ ಸಿನಿಮಾ ಗುರುವಾರ ಬಿಡುಗಡೆಯಾಗಿದೆ. ಅಭಿಮಾನಿಗಳಿಗಾಗಿ ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್‌ ಸೇರಿದಂತೆ ದೇಶದ ಹಲವಾರು ನಗರಗಳಲ್ಲಿ ಇಂದು ಬೆಳಗ್ಗೆಯಿಂದಲೇ ವಿಶೇಷ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಶಾರುಖ್ ಖಾನ್ ಅಭಿಮಾನಿಗಳು ಸಿನಿಮಾಗೆ ಫುಲ್‌ ಮಾರ್ಕ್ಸ್‌ ಕೊಟ್ಟಿದ್ದಾರೆ.

ADVERTISEMENT

ಸಿನಿಮಾ ಬಿಡುಗಡೆಗೂ ಮುನ್ನ ಶಾರುಖ್‌ ಖಾನ್‌ ತಿರುಪತಿಯ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು.

ಜವಾನ್‌ ಸಿನಿಮಾವನ್ನು ಮಾಸ್‌ ಮನರಂಜನೆ, ಬ್ಲಾಕ್‌ಬಸ್ಟರ್‌, ಮಾಸ್ಟರ್‌ಪೀಸ್‌, ಮಾಸ್ ಸಿನಿಮಾ ಎಂದು ಪ್ರೇಕ್ಷಕರು ಮತ್ತು ಅಭಿಮಾನಿಗಳು ಹೊಗಳುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಜವಾನ್‌ ಸಿನಿಮಾ ಶಾರುಖ್‌ ವೃತ್ತಿ ಜೀವನದಲ್ಲೇ ಅತ್ಯಂತ ಉತ್ತಮ ಸಿನಿಮಾ ಎಂದು ಕೆಲವರು ಬರೆದುಕೊಂಡಿದ್ದಾರೆ. 

ಶಾರುಖ್‌ ಎಂಟ್ರಿಗೆ ಇಡೀ ಬಾಲಿವುಡ್‌ ಫಿಧಾ ಆಗಿದೆ ಎಂದು ಕೆಲವರು ಬರೆದುಕೊಂಡಿದ್ದಾರೆ. ಚಿತ್ರದಲ್ಲಿ ಶಾರುಖ್‌ ನಾಯಕನಾಗಿ, ವಿಲನ್‌ ಆಗಿ ಅದ್ಬುತವಾಗಿ ನಟಿಸಿದ್ದಾರೆ ಎಂದು ಸಾಕಷ್ಟು ಜನರು ಬರೆದುಕೊಂಡಿದ್ದಾರೆ.

ಚಿತ್ರದಲ್ಲಿನ ಫೈಟ್‌ಗಳನ್ನು ಚಪ್ಪರಿಸಿರುವ ಅಭಿಮಾನಿಗಳು ಟ್ರೈನ್‌ ಹೈಜಾಕ್‌ ದೃಶ್ಯವನ್ನು ಬಹಳವಾಗಿ ಮೆಚ್ಚಿಕೊಂಡಿದ್ದಾರೆ. 

ಚಿತ್ರದಲ್ಲಿ ರೈತರ ಸಮಸ್ಯೆಗಳು ಹಾಗೂ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆ ಬಗ್ಗೆ ಬೆಳಕು ಚೆಲ್ಲಿರುವುದು ತುಂಬಾ ಇಷ್ಟವಾಗಿದೆ ಎಂದು ಕೆಲ ಸಿನಿಮಾ ಪ್ರಿಯರು ತಮ್ಮ ಎಕ್ಸ್‌ ಖಾತೆಗಳಲ್ಲಿ ಬರೆದುಕೊಂಡಿದ್ದಾರೆ.

ಪೊಲೀಸ್‌ ಆಗಿ ಕಾಣಿಸಿಕೊಂಡಿರುವ ನಯನತಾರ ಸಿನಿಮಾದಲ್ಲಿ ಮೋಡಿ ಮಾಡಿದ್ದಾರೆ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ. ಇದೇ ವೇಳೆ ದೀಪಿಕಾ ಪಡುಕೋಣೆ ಪಾತ್ರದ ಬಗ್ಗೆ ಎಕ್ಸ್‌ನಲ್ಲಿ ಚರ್ಚೆ ನಡೆಯುತ್ತಿದೆ.

ಟ್ವಿಟರ್‌ ವಿಮರ್ಶೆಯಲ್ಲಿ ಒಟ್ಟಾರೆ ಸಿನಿಮಾ ಅದ್ಬುತವಾಗಿದ್ದು ‘ಪಠಾಣ್‌‘ ಸಿನಿಮಾದ ಎಲ್ಲಾ ದಾಖಲೆಗಳನ್ನು ಮುರಿಯಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ. 

ಅನಿರುದ್ಧ ರವಿಚಂದ್ರನ್ ಸಂಗೀತ ನೀಡಿರುವ ಈ ಚಿತ್ರವನ್ನು ತಮಿಳಿನ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ, ಸುನಿಲ್ ಗ್ರೋವರ್ ಮುಂತಾದವರು ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.