ADVERTISEMENT

ಚಂದನವನ | ನಟನೆ ಜೊತೆ ಸಿದ್ದಾರ್ಥ್‌ ಆ್ಯಕ್ಷನ್‌ ಕಟ್‌

​ಪ್ರಜಾವಾಣಿ ವಾರ್ತೆ
Published 20 ಜುಲೈ 2023, 22:30 IST
Last Updated 20 ಜುಲೈ 2023, 22:30 IST
ಸಿದ್ದಾರ್ಥ್‌ 
ಸಿದ್ದಾರ್ಥ್‌    

‘ನನ್ನ ಸಿಪಾಯಿ’ ಮತ್ತು ‘ಗರುಡ’ ಸಿನಿಮಾಗಳಲ್ಲಿ ನಟಿಸುವ ಮೂಲಕ ಗಾಂಧಿನಗರದಲ್ಲಿ ಗುರುತಿಸಿಕೊಂಡಿರುವ ನಟ ಸಿದ್ದಾರ್ಥ್ ಮಹೇಶ್ ಇದೀಗ ನಿರ್ದೇಶನಕ್ಕೆ ಕೈಹಾಕಿದ್ದಾರೆ.

ಅವರ ಜನ್ಮದಿನದಂದೇ ಸಿದ್ದಾರ್ಥ್ ಅವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚುತ್ತಿರುವ ಸಿದ್ದಾರ್ಥ್ ಮಹೇಶ್ ನಿರ್ದೇಶಕರಾಗಿಯೂ ಹೊಸ ಹೆಜ್ಜೆ ಇಡುತ್ತಿದ್ದಾರೆ. ಈ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಳ್ಳುತ್ತಿದ್ದಾರೆ ಸಿದ್ದಾರ್ಥ್‌.

ಚಿತ್ರದ ಕಥೆಯೂ ಅವರದ್ದೇ. ಅತಶ್ರೀ ಮೀಡಿಯಾ ಕ್ರಿಯೇಶನ್ಸ್ ಮತ್ತು ಆರೇಂಜ್ ಪಿಕ್ಸೆಲ್ಸ್‌ನಡಿ ಸಿದ್ದಾರ್ಥ್ ಮಹೇಶ್ ಸ್ನೇಹಿತರಾಗಿರುವ ಎಸ್.ಚಂದನ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ತಮಿಳು ಸಿನಿಮಾ ನಿರ್ಮಿಸಿದ್ದ ಚಂದನ್ ಅವರಿಗೆ ಇದು ಕನ್ನಡದಲ್ಲಿ ಚೊಚ್ಚಲ ನಿರ್ಮಾಣದ ಸಿನಿಮಾ. ಕಥೆ ಕೊನೆಯ ಹಂತದಲ್ಲಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲು ಚಿತ್ರತಂಡ ಸಜ್ಜಾಗಿದೆ. ಈ ಸಿನಿಮಾ ಪ್ರೇಮಕಥೆ, ಆ್ಯಕ್ಷನ್ ಕಥಾಹಂದರ ಹೊಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.